Advertisement
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಇಂದ್ರಾಳಿ ರೈಲ್ವೇ ಮೇಲ್ಸೇತುವೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಅ. 1ರಂದು ಆರಂಭಿಸಿ ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ಒಂದು ಬದಿಯ ರಸ್ತೆಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯ ವನ್ನು ರಾ.ಹೆ. ಪ್ರಾಧಿಕಾರದ ಅಧಿಕಾರಿ ಗಳು ಕೈಗೊಳ್ಳಬೇಕು. ಕಾಮಗಾರಿಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ಪೊಲೀಸ್ ಇಲಾಖೆ, ನಗರಸಭೆ ಹಾಗೂರೈಲ್ವೇ ಇಲಾಖೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತ ರವಿಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ರಾ.ಹೆ. ಪ್ರಾಧಿಕಾರದ ಅಭಿಯಂತ ನಾಗರಾಜ್ ಉಪಸ್ಥಿತರಿದ್ದರು. ಅಪಘಾತವಾದರೆ ಅಧಿಕಾರಿಗಳೇ ಹೊಣೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ರಾ.ಹೆ.ಯಲ್ಲಿ ಈ ಹಿಂದೆಯೇ ಅಪಘಾತ ವಲಯ ಸ್ಥಳಗಳನ್ನು ಗುರುತಿಸಿ, ಅಗತ್ಯ ವೈಜ್ಞಾನಿಕ ಕಾರ್ಯಗಳನ್ನು ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿ ಆಗದೇ ಇರುವ ಬಗ್ಗೆ ಸಮಿತಿಯ ಗಮನಕ್ಕೆ ತಂದರು. ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸ್ಥಳದಲ್ಲಿ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಪರಾಧಿಗಳನ್ನಾಗಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ರಸ್ತೆ ನಿಯಮಗಳ ಉಲ್ಲಂಘನೆಯ 42,944 ಪ್ರಕರಣಗಳಲ್ಲಿ 1.96 ಕೋ.ರೂ.ಗಳಿಗೂ ಹೆಚ್ಚು ದಂಡ ಸಂಗ್ರಹಿಸಲಾಗಿದೆ ಎಂದರು.