Advertisement
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಚಂದು ಮೈದಾನದಲ್ಲಿ ಗುರುವಾರ ನಡೆದ ಪೋಲಿಸ್ ಹುತಾತ್ಮ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಮಾತನಾಡಿ, ಪೊಲೀಸ್ ಹುತಾತ್ಮರ ದಿನಾಚರಣೆಯ ಮಹತ್ವ ಹಾಗೂ 1-9-2020 ರಿಂದ 31-8-2021 ರ ವರೆಗೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾದ ಕರ್ನಾಟಕದ 16 ಮಂದಿ ಸೇರಿದಂತೆ ದೇಶದ ಒಟ್ಟು 377 ಪೊಲೀಸರ ನಾಮಸ್ಮರಣೆ ಮಾಡಿದರು. ಹುತಾತ್ಮ ಪೊಲೀಸರ ಗೌರವಾರ್ಥ 3 ಸುತ್ತು ಗುಂಡು ಹಾರಿಸಲಾಯಿತು. ಎರಡು ನಿಮಿಷಗಳ ಮೌನಾಚರಣೆ ನಡೆಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಪ್ರೊಬೆಷನರ್ ಆರ್.ಎಸ್.ಐ. ಪುನೀತ್ ಕುಮಾರ್ ಪರೇಡ್ ನೇತೃತ್ವ ವಹಿಸಿದ್ದರು. ಕರಾವಳಿ ಕಾವಲು ಪೊಲೀಸ್‌ನ ಎಸ್.ಐ.ಬಿ.ಮನಮೋಹನ್ ರಾವ್ ನಿರೂಪಿಸಿದರು.
Related Articles
Advertisement
ಐಪಿಎಸ್ ತರಬೇತಿ ನೆನೆಪಿಸಿಕೊಂಡ ಜಿಲ್ಲಾಧಿಕಾರಿತಾವು ಐಪಿಎಸ್ ತರಬೇತಿಯಲ್ಲಿದ್ದಾಗ ಅಕಾಡೆಮಿಯಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮೊದಲು ಸಮಾಜಕ್ಕಾಗಿ ಕರ್ತವ್ಯ ನಿರ್ವಹಿಸಬೇಕು. ಎರಡನೇಯದಾಗಿ ತಮ್ಮ ಜತೆಯಲ್ಲಿರುವ ಸಹೋದ್ಯೋಗಿಗಳ ರಕ್ಷಣೆಗೆ ಮತ್ತು ಅಂತಿಮವಾಗಿ ತನ್ನ ಪ್ರಾಣದ ಕುರಿತು ಯೋಚಿಸಬೇಕು ಎಂದು ತಿಳಿಸಿದ್ದರು. ಪೊಲೀಸರು ಎಂದೆಂದಿಗೂ ಅದೇ ರೀತಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.