Advertisement
ಮೂರನೇ ಲಾಕ್ ಡೌನ್ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಹಲವು ರೀತಿಯ ವಾಣಿಜ್ಯ ಕಾರ್ಯಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ.
Related Articles
Advertisement
ಜಿಲ್ಲೆ ಸದ್ಯಕ್ಕೆ ಹಸುರು ವಲಯದಲ್ಲಿ ಇದ್ದರೂ, ಕೋವಿಡ್ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಕಾರಣದಿಂದ ಸರಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ. ಹಾಗಾಗಿ, ಅವಶ್ಯಕ ಸಾಮಾಗ್ರಿಗಳನ್ನು ಖರೀದಿಸಲು ಅಂಗಡಿಗೆ ತೆರಳುವವರು, ಕಛೇರಿ ಕೆಲಸಕ್ಕೆ ಸೇರಿದಂತೆ ಇನ್ನಿತರ ಕಾರಣಕ್ಕೆ ಸಂಚರಿಸುವವರು ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಹಾಗಾಗಿ ಮಾಸ್ಕ್ ಗಳನ್ನು ಧರಿಸಿಕೊಂಡು ಓಡಾಡುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುತ್ತದೆ. ಇದಕ್ಕೆ ತಪ್ಪಿದಲ್ಲಿ ಅಂತಹ ವ್ಯಕ್ತಿಗಳಿಗೆ ದಂಡ ವಿಧಿಸುವ ಅವಕಾಶವನ್ನೂ ಜಿಲ್ಲಾಧಿಕಾರಿಯವರು ಪೊಲೀಸ್ ಇಲಾಖೆಗೆ ನೀಡಿದ್ದಾರೆ.
ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರವನ್ನು ಪಾಲಿಸದಿರುವುದೂ ಸೇರಿದಂತೆ ಕೋವಿಡ್ ವೈರಸ್ ನಿರೋಧಕ ಕ್ರಮಗಳನ್ನು ಅನುಸರಿಸದಿರುವ ವ್ಯಕ್ತಿಗಳಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಜಿಲ್ಲೆಯ ಇತರೆ ಕಡೆಗಳಲ್ಲಿ ರೂ. 100 ದಂಡ ವಿಧಿಸುವಂತೆ ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.