Advertisement

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

12:53 AM Jul 07, 2024 | Team Udayavani |

ಉಡುಪಿ: ಜಿಲ್ಲೆಯ ಎಲ್ಲ ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ನಿರ್ಮಾಣದಾರರು ಕಾಮಗಾರಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷೆ ವಹಿಸಿಕೊಳ್ಳಬೇಕಿದ್ದು, ಅದು ಅವರ ಜವಾಬ್ದಾರಿಯಾಗಿದೆ.

Advertisement

ಮಳೆಗಾಲ ಪ್ರಾರಂಭವಾಗಿದ್ದು, ಕಾಮಗಾರಿ ಆರಂಭಿಸಿರುವ ಸ್ಥಳಗಳಲ್ಲಿ ಭೂಕುಸಿತ, ಅಪಘಾತ ಹಾಗೂ ಅವಘಡ ಉಂಟಾಗದಂತೆ ಸೂಕ್ತ ಕ್ರಮಗಳನ್ನು ತತ್‌ಕ್ಷಣ ತೆಗೆದುಕೊಂಡು ಯಾವುದೇ ಕಾರ್ಮಿಕರ ಜೀವ ಹಾನಿಯಾಗದಂತೆ ನೋಡಿಕೊಳ್ಳಬೇಕು. ಮುನ್ನೆಚ್ಚರಿಕೆ ವಹಿಸಲು ಸಾಧ್ಯವಿಲ್ಲದಿದ್ದಲ್ಲಿ ಅಂತಹ ಕಾಮಗಾರಿಯನ್ನು ಸುರಕ್ಷೆ ದೃಷ್ಟಿಯಿಂದ ತತ್‌ಕ್ಷಣ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಅಪಘಾತವಾಗಿ ಕಾರ್ಮಿಕರ ಜೀವಹಾನಿ ಹಾಗೂ ಇನ್ನಿತರ ಅವಘಡವಾದಲ್ಲಿ ಕಾಮಗಾರಿಯ ನಿರ್ಮಾಣದಾರರ ವಿರುದ್ಧ ಕಟ್ಟಡ ಕಾನೂನು ಪ್ರಕಾರ ಕ್ರಮ ಜರಗಿಸಲಾಗುವುದು. ನಿಯಮ ಉಲ್ಲಂಘನೆ ಪ್ರಕರಣಗಳಿಗೆ 3 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ದಂಡವನ್ನು ನ್ಯಾಯಾಲಯ ವಿಧಿಸಬಹುದಾಗಿದೆ. ನಿರ್ಮಾಣ ಸ್ಥಳದಲ್ಲಿ ಸುರಕ್ಷೆಗಾಗಿ ಮುನ್ನೆಚ್ಚರಿಕೆ ವಹಿಸಿ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡಿಕೊಂಡು ಕಾನೂನು ಪಾಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next