ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು ಜ. 21ರ ಬೆಳಗ್ಗೆ 11 ಗಂಟೆಗೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
Advertisement
ಕಿರಿಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.