Advertisement
ಚೇರ್ಕಾಡಿ ಗ್ರಾಮ ಪೇತ್ರಿ ಯುವಕ ಮಂಡಲದಲ್ಲಿ ಶನಿವಾರ ಜರಗಿದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ತಂಡವಾಗಿ ಕಾರ್ಯನಿರ್ವಹಿಸಿಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್, ಗ್ರಾಮಗಳ ಅಭಿವೃದ್ಧಿಗೆ ಉತ್ತಮ ರಸ್ತೆಗಳು ಅಗತ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿಗೊಂಡ ರಸ್ತೆಗಳಿಗೆ ತಡೆ ಮಾಡುವುದು, ರಸ್ತೆಯಲ್ಲಿ ಓಡಾಟಕ್ಕೆ ಅಡ್ಡಿಪಡಿಸುವ ಕೆಲಸಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಇದಕ್ಕೆ ಜಿಲ್ಲಾಡಳಿತ, ಜಿ.ಪಂ. ಸೂಕ್ತ ಕಾನೂನು ರೂಪಿಸಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು. ಜನರ ಸಮಸ್ಯೆಗೆ ಸ್ಪಂದಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡವಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಚೇರ್ಕಾಡಿ ಗ್ರಾ.ಪಂ. ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಕುಂದಾಪುರ ಎಸಿ ರಾಜು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ರವೀಂದ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ| ಕೆಂಪೇಗೌಡ, ಪಶುಪಾಲನ ಇಲಾಖೆ ಉಪ ನಿರ್ದೇಶಕ ಡಾ| ಶಂಕರ್ ಶೆಟ್ಟಿ, ಡಿಎಫ್ಒ ಆಶೀಶ್ ರೆಡ್ಡಿ, ಆಹಾರ ಇಲಾಖೆ ಉಪ ನಿರ್ದೇಶಕ ಮೊಹಮ್ಮದ್ ಇಸಾಕ್, ಡಿಡಿಪಿಐ ಗೋವಿಂದ ಮಡಿವಾಳ, ಬ್ರಹ್ಮಾವರ ತಾ.ಪಂ. ಇಒ ಎಚ್. ಇಬ್ರಾಹಿಂಪುರ, ಬಿಇ ಒ ಬಿ.ಟಿ. ನಾಯ್ಕ ಉಪಸ್ಥಿತರಿದ್ದರು. ತಹಶೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿ, ಪ್ರಸ್ತಾವಿಸಿ, ಶಿಕ್ಷಕ ಶಶಿಧರ ಶೆಟ್ಟಿ ನಂಚಾರು ಕಾರ್ಯಕ್ರಮ ನಿರೂಪಿಸಿದರು. 77 ಅರ್ಜಿಗಳು ಸಲ್ಲಿಕೆ
ಕಂದಾಯ 31, ಪಂಚಾಯತ್ ರಾಜ್ 29, ಮೆಸ್ಕಾಂ 3, ಸಣ್ಣ ನೀರಾವರಿ 2 ಮತ್ತು ಆರೋಗ್ಯ, ಸಮಾಜ ಕಲ್ಯಾಣ, ಸಾರಿಗೆ, ಆಹಾರ, ಕೌಶಾಲ್ಯಾಭಿವೃದ್ಧಿ, ಐಟಿಡಿಪಿ, ಧಾರ್ಮಿಕ ದತ್ತಿ, ತೋಟಗಾರಿಕೆ ಸಹಿತ ವಿವಿಧ ಇಲಾಖೆಗಳಿಗೆ ಸಂಬಂಧಿಸಿ ತಲಾ ಒಂದೊಂದು ಅರ್ಜಿ ಸಲ್ಲಿಕೆಯಾಗಿದ್ದವು.