Advertisement

ಉಡುಪಿ: ಡೆಂಗ್ಯೂ ಪ್ರಕರಣದಲ್ಲಿ ಇಳಿಕೆ

07:35 AM Aug 15, 2017 | Team Udayavani |

ಉಡುಪಿ: ಜಿಲ್ಲೆಯಲ್ಲಿ 2016ರಲ್ಲಿ 360 ಡೆಂಗ್ಯೂ ಪ್ರಕರಣ ಕಂಡುಬಂದಿದ್ದು, ಈ ವರ್ಷ ವ್ಯಾಪಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ 232ಕ್ಕೆ ಇಳಿದಿದೆ ಹಾಗೂ ಯಾವುದೇ ಡೆಂಗ್ಯೂ ಸಂಶಯಾಸ್ಪದ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಪ್ರೇಮಾನಂದ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ಯೂ ನಿಯಂತ್ರಣ ಸಮಿತಿ ಸಭೆಗೆ ಮಾಹಿತಿ ನೀಡಿದರು.

Advertisement

ಕಟ್ಟಡ ಮಾಲಕರಿಗೆ ದಂಡ: ಎಚ್ಚರಿಕೆ
ಡೆಂಗ್ಯೂ ನಿಯಂತ್ರಣ ಕುರಿತಂತೆ ಜಿಲ್ಲೆಯ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು. ಸೊಳ್ಳೆ ಉತ್ಪತ್ತಿ ತಾಣಗಳಾದ ಕಲ್ಲುಕೋರೆಗಳಲ್ಲಿ ಸೊಳ್ಳೆ ಬೆಳವಣಿಗೆ ತಡೆಯಲು ಮೀನುಗಳನ್ನು ಬಿಡುವ ಕುರಿತಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಕ್ರಮ ಕೈಗೊಳ್ಳುವಂತೆ ಹಾಗೂ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುವ ಕಟ್ಟಡಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡುಬಂದರೆ ಅಂತಹ ಕಟ್ಟಡ ಮಾಲಕರಿಂದ ದಂಡ ವಸೂಲಿ ಮಾಡುವ ಕುರಿತ ನಿರ್ಣಯವನ್ನು ತಮ್ಮ ಬೈಲಾಗಳಲ್ಲಿ ಅಳವಡಿಸಿಕೊಳ್ಳುವಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸೂಚಿಸಿದರು.

ಜಿಲ್ಲೆಯ ಪ್ರತಿ ಮನೆ ಮನೆಗೆ ಹಾಗೂ ಶಾಲೆಗಳಲ್ಲಿ ಡೆಂಗ್ಯೂ ಕುರಿತು ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next