Advertisement

ಉಡುಪಿ: ಆರೋಗ್ಯ ಇಲಾಖೆ ಕಟ್ಟೆಚ್ಚರ

12:07 AM Feb 04, 2020 | mahesh |

ಉಡುಪಿ: ನೆರೆಯ ಕಾಸರಗೋಡು ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗಿದೆ.

Advertisement

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ ಅವರು, ಪಕ್ಕದ ಕಾಸರಗೋಡಿನಲ್ಲಿ ಕೊರೊನಾ ವೈರಸ್‌ ಪತ್ತೆಯಾಗಿದ್ದರೂ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸೋಂಕು ತಡೆ ಹಾಗೂ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನು ಆರೋಗ್ಯ ಇಲಾಖೆ ಮಾಡಿಕೊಂಡಿದೆ ಎಂದಿದ್ದಾರೆ.

ಜಿಲ್ಲಾ ಕೇಂದ್ರ ಹಾಗೂ ಮೂರು ತಾಲೂಕು ವ್ಯಾಪ್ತಿಯಲ್ಲಿ ತಾಲೂಕು ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ವೈದ್ಯರು, ಆಸ್ಪತ್ರೆಗಳ ಸಿಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಾಗರಿಕರ ಮನೆಗಳಿಗೆ ತೆರಳಿ ಹಾಗೂ ಅಲ್ಲಲ್ಲಿ ವೈರಸ್‌ ಸೋಂಕು ತಡೆ, ನಿಯಂತ್ರಣ, ಮುಂಜಾಗ್ರತೆ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ನಡೆಸಿದ್ದಾರೆ ಎಂದಿದ್ದಾರೆ.

ಪ್ರತ್ಯೇಕ ವಾರ್ಡ್‌ ಸಿದ್ಧ
ಜಿಲ್ಲೆಯಲ್ಲಿ ಯಾವುದೇ ಶಂಕಿತ ಪ್ರಕರಣಗಳು ಇದುವರೆಗೆ ಕಂಡು ಬಂದಿಲ್ಲ. ಸ್ವಯಂ ತಪಾಸಣೆಗೂ ಯಾರೂ ಒಳಗಾಗಿಲ್ಲ. ಶಂಕಿತ ರೋಗಿಗಳನ್ನು ದಾಖಲು ಮಾಡಲು ಜಿಲ್ಲಾಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ ತೆರೆಯಲಾಗಿದೆ. ಯಾವುದೇ ಅಪಪ್ರಚಾರ, ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡದಂತೆ ಮನವಿ ಮಾಡಿರುವ ಅವರು ಅಂತಹ ಯಾವುದೇ ಸಂದೇಹಗಳಿದ್ದಲ್ಲಿ ಹೆಲ್ಪ್ ಲೈನ್‌ ನೆರವು ಪಡೆಯುವಂತೆ ಅಥವಾ ನೇರ ವೈದ್ಯರನ್ನು ಭೇಟಿಯಾಗುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next