Advertisement

ಉಡುಪಿ ಜಿಲ್ಲೆ: ಮಳೆಯಿಂದ 28 ಕೋ.ರೂ. ನಷ್ಟ – ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌

12:36 AM Jul 27, 2023 | Team Udayavani |

ಉಡುಪಿ: ಜಿಲ್ಲೆಯಲ್ಲಿ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ರೂ. ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ತಿಳಿಸಿದರು.

Advertisement

ಬುಧವಾರ ಬೆಂಗಳೂರಿನ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಸಚಿವರು ಪಾಲ್ಗೊಂಡರು ಮುಖ್ಯಮಂತ್ರಿಯವರಿಗೆ ಈ ವಿಷಯ ತಿಳಿಸಿದರು.

ಶೀಘ್ರ ಭೇಟಿ, ಪರಿಶೀಲನೆ
ಅನಂತರ ಮಾತ ನಾಡಿದ ಅವರು, ಜಿಲ್ಲೆಯಲ್ಲಿ ಪ್ರತೀ ವರ್ಷವೂ ಮಳೆಯಿಂದ ಅನಾಹು ತಗಳು ಸಂಭವಿಸುತ್ತಿವೆ. ಇನ್ನು ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಮಳೆ ಸಾಧ್ಯತೆ, ಮಳೆಯ ಬಿರುಸಿನ ಬಗ್ಗೆ ಪ್ರತೀದಿನ ಮಾಹಿತಿ ನೀಡಬೇಕು. ಮಣ್ಣು ಕುಸಿತವಾಗುವ ಸ್ಥಳಗಳ ಬಗ್ಗೆ ಇಲಾಖೆಗಳಿಗೆ ಮಾಹಿತಿ ಇರುತ್ತದೆ. ಕಾಳಜಿಯಿಂದ ವರ್ತಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿಪಂ ಸಿಇಒ ಪ್ರಸನ್ನ ಎಚ್‌. ವೀಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.

Advertisement

ಸಿಎಂ ಮೆಚ್ಚುಗೆ
ಮಳೆ ಅನಾಹುತದ ಬಗ್ಗೆ ಎಚ್ಚರಿಕೆ ವಹಿಸಿ ಜಿಲ್ಲೆಯಲ್ಲಿ ಮೊದಲೆ ಮುಂಜಾಗ್ರತ ಕ್ರಮ ಕೈಗೊಂಡ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next