Advertisement
ಸಚಿವ ಸುನಿಲ್ ಸೂಚನೆಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಸೋಂಕು ಇರುವ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರ ಜತೆ ಅವರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಮಾತ್ರವಲ್ಲದೇ ಕಂಟೈನ್‌ಮೆಂಟ್ ವಲಯಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 63 ಮಂದಿಗೆ ಸೋಂಕು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 18 ಮಂದಿ ಗುಣಮುಖ ಹೊಂದಿದ್ದಾರೆ. ಪ್ರಸ್ತುತ 231 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 0.78 ರಷ್ಟಿದೆ.
Related Articles
ಉಡುಪಿ: ಜಿಲ್ಲೆಯಲ್ಲಿ ರವಿವಾರ 54 ಪ್ರಕರಣ ದೃಢಪಟ್ಟಿದೆ. 5,777 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 8 ಮಂದಿ ಬಿಡುಗಡೆಯಾಗಿದ್ದಾರೆ. 186 ಪ್ರಕರಣಗಳು ಸಕ್ರಿಯವಾಗಿವೆ.
Advertisement
ಕಾಸರಗೋಡು: 42 ಮಂದಿಗೆ ಸೋಂಕು ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 42 ಪ್ರಕರಣ ದೃಢಪಟ್ಟಿದೆ. 104 ಮಂದಿ ಗುಣಮುಖರಾಗಿದ್ದಾರೆ. 321 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡಗು: 10 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ರವಿವಾರ 10 ಪ್ರಕರಣ ದೃಢಪಟ್ಟಿದ್ದು 85 ಮಂದಿ ಗುಣಮುಖರಾಗಿದ್ದಾರೆ.