Advertisement

ಮಹರ್ಷಿ ವಾಲ್ಮೀಕಿ ನಿತ್ಯ ಸ್ಮರಣೀಯರು: ಶಾಸಕ ರಘುಪತಿ ಭಟ್‌

04:59 PM Oct 09, 2022 | Team Udayavani |

ಮಣಿಪಾಲ: ಜಗತ್ತಿಗೆ ಮಹಾನ್‌ ಮಾನವೀಯ ಮೌಲ್ಯಗಳುಳ್ಳ ಸಂದೇಶ ಸಾರುವ ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ನಿತ್ಯ ಸ್ಮರಣೀಯರು ಎಂದು ಶಾಸಕ ಕೆ.ರಘುಪತಿ ಭಟ್‌ ಹೇಳಿದರು.

Advertisement

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ರವಿವಾರ ಜಿಲ್ಲಾಡಳಿತ, ಜಿ.ಪಂ., ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಾಲ್ಮೀಕಿ ರಾಮಾಯಣ ರಚನೆಯ ಮೂಲಕ ಭಾರತವನ್ನು ಪುಣ್ಯಭೂಮಿಯಾಗಿಸಿದರು ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ವಾಲ್ಮೀಕಿ ವ್ಯಕ್ತಿತ್ವ ಮತ್ತು ಜೀವನದ ಬಗ್ಗೆ ಶಿಕ್ಷಕ ನರೇಂದ್ರ ಕುಮಾರ್‌ ಕೋಟ ಉಪನ್ಯಾಸ ನೀಡಿದರು.

ಪ.ವರ್ಗದ ಸಮುದಾಯದಲ್ಲಿ ವಿಶಿಷ್ಟ ಸಾಧನೆ ಮಾಡಿದ ಡಾ| ಉದಯ ಕುಮಾರ್‌ ಚೇರ್ಕಾಡಿ, ತೆಂಕುಮಾರ್‌ ನಾರಾಯಣ ಗೌಡ, ಸುರೇಶ್‌ ಎಳಜಿತ್‌ ಹಾಗೂ ಶೈಕ್ಷಣಿಕ ಮತ್ತು ಕ್ರೀಡಾ ವಲಯದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಇಲಾಖೆಯ ವಿವಿಧ ಸವಲತ್ತುಗಳ ವಿತರಿಸಲಾಯಿತು.

Advertisement

ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಪೆಡೆ°àಕರ್‌ ಉಪಸ್ಥಿತರಿದ್ದರು.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್‌ ಸ್ವಾಗತಿಸಿ, ಪ್ರಶಾಂತ್‌ ಶೆಟ್ಟಿ ಹಾವಂಜೆ ನಿರೂಪಿಸಿದರು.

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರಕಾರ ಅತ್ಯಂತ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಪ.ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ.15 ರಿಂದ ಶೇ.17ಕ್ಕೆ ಹಾಗೂ ಪ.ವರ್ಗದ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.7ಕ್ಕೆ ಏರಿಕೆ ಮಾಡುವ ಮೂಲಕ ಪ.ಜಾತಿ, ಪಂಗಡದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆಯುವಂತೆ ಮಾಡಿರುವುದು ಐತಿಹಾಸಿಕ ತೀರ್ಮಾನವಾಗಿದೆ. ಈ ವರ್ಗಗಳ ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.
-ಕೆ.ರಘುಪತಿ ಭಟ್‌, ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next