ಉಡುಪಿ: ಪರಿಸರ ಸ್ನೇಹಿಯಾದ ಆಡಳಿತಕ್ಕೆ ಹಲವಾರು ಕ್ರಮಗಳನ್ನು ಕೈಗೊಂಡು ಜಾರಿಗೆ ತಂದಿದ್ದ ಜಿಲ್ಲಾಡಳಿತ ಇದೀಗ ಲೋಕಸಭಾ ಚುನಾವಣೆಯನ್ನೂ ಪರಿಸರ ಸ್ನೇಹಿ ನೆಲೆಯಲ್ಲಿ ಸಿದ್ಧತೆ ನಡೆಸಿ ಇನ್ನೊಂದು ದಿಟ್ಟ ಹೆಜ್ಜೆ ಇರಿಸಿದೆ.
ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಿಸು ವಾಗ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿ ನಡೆಸಲು ಒತ್ತು ನೀಡುವುದಾಗಿ ದಿಲ್ಲಿಯಲ್ಲಿ ಕೇಂದ್ರ
ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಪ್ರಕಟಿಸಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣೆ ಘೋಷಣೆಯ ಆರಂಭದಲ್ಲಿಯೇ ಎಲ್ಲಾ ರಾಜ ಕೀಯ ಪಕ್ಷಗಳು, ಅಭ್ಯರ್ಥಿಗಳ ಸಭೆ ನಡೆಸಿ ಪರಿಸರ ಸ್ನೇಹಿ ಚುನಾವಣೆ ನಡೆಸಲು ಸಹಕಾರ ಕೋರಿತ್ತು.
ಈ ಹಿಂದೆ ಚುನಾವಣೆ ಎಂದರೆ ರಸ್ತೆಯುದ್ದಕ್ಕೂ ಬ್ಯಾನರ್, ಬಂಟಿಂಗ್ಸ್, ಪಕ್ಷದ ಧÌಜಗಳು ಸಾಮಾನ್ಯ ವಾಗಿತ್ತು. ಸಾರ್ವಜನಿಕ ಸ್ಥಳಗಳ ಗೋಡೆಗಳಲ್ಲೂ ಚುನಾವಣೆಯ ಭರಾಟೆ ಎದ್ದು ಕಾಣುತ್ತಿದ್ದವು. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಚುನಾವಣೆ ಕುರಿತ ರಾಜಕೀಯ ಪಕ್ಷಗಳ/ಅಭ್ಯರ್ಥಿಗಳ ಬಗ್ಗೆ ಪ್ಲಾಸ್ಟಿಕ್ ಫ್ಲೆಕ್ಸ್, ಕಟೌಟ್, ಬಂಟಿಂಗ್ಸ್‌ಗಳು ಅಪರೂಪವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆದು ಬ್ಯಾನರ್, ಕಟೌಟ್, ಬಂಟಿಂಗ್ಸ್ ಹಾಕಲು ಅವಕಾಶ ಇದ್ದರೂ, ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳಿಂದ ಇವುಗಳಿಗೆ ಅನುಮತಿ ಕೋರಿ ಅರ್ಜಿಗಳು ಬಂದಿಲ್ಲ.
ವಾಯು ಮಾಲಿನ್ಯ ತಡೆಗಟ್ಟಲು ಯಾವುದೇ ರೀತಿಯ ವಾಹನ ರ್ಯಾಲಿ, ಬೈಕ್ ರ್ಯಾಲಿಗಳಿಗೆ ಸಂಬಂಧಿಸಿದಂತೆ, ರಾಜಕೀಯ ಪಕ್ಷದ/ಅಭ್ಯರ್ಥಿಗಳ ಸಭೆಯಲ್ಲಿ ಚರ್ಚಿಸಲಾಗಿತ್ತು. ಅಂದು ಪರಿಸರ ಸ್ನೇಹಿ ಚುನಾವಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದ ಅವರು ಯಾವುದೇ ರ್ಯಾಲಿ ಗಳಿಗೆ ಜಿಲ್ಲಾಡಳಿತದ ಅನುಮತಿಯನ್ನು ಕೋರದೆ ಪರಿಸರದ ಬಗ್ಗೆ ಕಾಳಜಿಯನ್ನು ಪ್ರದರ್ಶಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಲೋಕಸಭಾ ಚುನಾವಣೆ ಯನ್ನು ಪರಿಸರ ಸ್ನೇಹಿಯಾಗಿ ನಡೆಸಲು ಎಲ್ಲ ಅಭ್ಯರ್ಥಿಗಳು ಮತ್ತು ಪಕ್ಷಗಳು ಸಹಕಾರ ನೀಡಿರು ವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹೆಫಿÕಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಜಿಲ್ಲಾಡಳಿತವು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತಾಲೂಕು ಕೇಂದ್ರಗಳಲ್ಲಿ ಆಯೋಜಿಸಿದ್ದ ತರಬೇತಿ ಯಲ್ಲಿ ಕಾಫಿ, ಟೀ ಕುಡಿಯಲು ಪೇಪರ್‌ನಿಂದ ಮಾಡಿದ ಗ್ಲಾಸ್‌ಗಳು , ಊಟಕ್ಕೆ ಅಡಿಕೆ ಹಾಳೆಯ ತಟ್ಟೆ , ಕುಡಿಯಲು ನೀರಿನ ಕ್ಯಾನ್‌ಗಳನ್ನು ಇಟ್ಟು ಪ್ಲಾಸ್ಟಿಕ್ ಮುಕ್ತ ತರಬೇತಿ ಕೇಂದ್ರ ಆಯೋಜಿಸಲಾಗಿತ್ತು.