Advertisement

Udupi; ಮಹಿಷಾ ದಸರಾ ನಡೆಸದಂತೆ ಜಿಲ್ಲಾಧಿಕಾರಿ ಆದೇಶ

10:33 PM Oct 13, 2023 | Team Udayavani |

ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಮಹಿಷ ದಸರಾ ಆಚರಣೆಯ ಪರ, ವಿರೋಧ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್, ಅಳವಡಿಸುವುದು ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸುವುದನ್ನು ನಿಷೇಧಿಸಿ, ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

Advertisement

ಆ ನಿಮಿತ್ತ ಘೋಷಣೆ ಕೂಗೂವುದು, ಭಾಷಣ ಮಾಡುವುದು, ಹಾಡು, ಗಾಯನದ ಮೂಲಕ ಪ್ರಚೋದಿಸುವುದು ಹಾಗೂ ಭಿತ್ತಿಪತ್ರ ಅಂಟಿಸುವಂತಿಲ್ಲ. ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ, ಪಟಾಕಿ ಸಿಡಿಸುವುದು, ಸ್ಪೋಟಕ ಒಯ್ಯುವುದಕ್ಕೂ ನಿರ್ಬಂಧ ಹೇರಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next