Advertisement
ವಿಪತ್ತು ಸಂದರ್ಭದಲ್ಲಿ ತುರ್ತು ಪರಿಹಾರ ಮತ್ತು ಸಂಪನ್ಮೂಲ ಕ್ರೋಡೀಕರಣ, ಉಪಕರಣಗಳು ಮತ್ತು ಮಾನವ ಸಂಪನ್ಮೂಲ ಕ್ರಮ ಗಳನ್ನು ಕೈಗೊಳ್ಳಲು ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ನಕ್ಷೆ ಮತ್ತು ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ಅತ್ಯಂತ ಅಗತ್ಯವಿದೆ.
ಈ ಯೋಜನೆಯು ವಿಪತ್ತು ನಿರ್ವಹಣೆಗೆ ಸಂಬಂಧಪಟ್ಟ ಇಲಾಖೆಗಳ ಮಾಹಿತಿ, ದತ್ತಾಂಶ, ಸಂಪನ್ಮೂಲ ಗಳು ಹಾಗೂ ಜಿಲ್ಲಾ ಮಟ್ಟದ ವಿಪತ್ತು ಸಂಭವನೀಯ ಪ್ರದೇಶಗಳ ನಕ್ಷೆ, ವಿಪತ್ತು ನಿರ್ವಹಣೆಯಲ್ಲಿ ಪ್ರಮಾಣಿತ ವಿಪತ್ತು ಕಾರ್ಯಾಚರಣೆ ಕಾರ್ಯವಿಧಾನಗಳು, ಮಾರ್ಗಸೂಚಿ ಗಳನ್ನು ಒಳಗೊಂಡಿದೆ. ಇದಕ್ಕಾಗಿ ವಿಪತ್ತು ನಿರ್ವಹಣೆಯ ಸಂಬಂಧಪಟ್ಟ ಇಲಾಖೆಗಳು ಮತ್ತು ಅಧಿಕಾರಿಗಳು ವಿಪತ್ತು ನಿರ್ವಹಣೆಗೆ ಅಗತ್ಯವಾದ ಮಾಹಿತಿ, ದತ್ತಾಂಶಗಳ ಸಂಗ್ರಹಣೆ ಮತ್ತು ರವಾನೆ, ಸಂಯೋಜನೆಗಾಗಿ ಮೊಬೈಲ್ ತಂತ್ರಾಂಶ ಮತ್ತು ಅಂತರ್ಜಾಲ ತಾಣವನ್ನು ಅಭಿವೃದ್ಧಿ ಗೊಳಿಸಲಾಗಿದೆ.
Related Articles
Advertisement
ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಸ್ಥಳೀಯ ಪ್ರದೇಶದಲ್ಲಿ ರಕ್ಷಣೆಗೆ ಅಗತ್ಯ ವಿರುವ ಲಭ್ಯ ಸಂಪನ್ಮೂಲಗಳು, ಲಭ್ಯವಿರುವ ಸಿಬಂದಿ, ವಿಪತ್ತು ನಿರ್ವಹಣ ತರಬೇತಿ ಹೊಂದಿದ ಸ್ಥಳೀಯ ನಿವಾಸಿಗಳು, ಸಮೀಪದ ಶಾಲೆ, ಆಸ್ಪತ್ರೆ, ಅಲ್ಲಿನ ವೈದ್ಯಕೀಯ ಸೌಲಭ್ಯಗಳು ಮತ್ತು ಸಿಬಂದಿ, ಕಾಳಜಿ ಕೇಂದ್ರಗಳ ಮಾಹಿತಿ, ತುರ್ತು ಸಂದರ್ಭದಲ್ಲಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು ಬೆರಳ ತುದಿಯಲ್ಲಿಯೇ ಈ ಯೋಜನೆಯ ಮೂಲಕ ಲಭ್ಯವಾಗಲಿದೆ. ರಕ್ಷಣಾ ಕಾರ್ಯಗಳನ್ನು ಅತ್ಯಂತ ಶೀಘ್ರದಲ್ಲಿ ಕೈಗೊಳ್ಳಲು ಯೋಜನೆ ನೆರವಾಗಲಿದೆ ಎಂಬ ವಿವರ ನೀಡಿದ್ದಾರೆ.
ಸಾರ್ವಜನಿಕರು ಉಪಯೋಗ:ಯೋಜನೆಗೆ ಅಗತ್ಯವಾದ ವಿವಿಧ ಇಲಾಖೆಗಳ ಅಧಿಕೃತ ಮಾಹಿತಿ ಮತ್ತು ದತ್ತಾಂಶ ಸಂಗ್ರಹಣೆಯಲ್ಲಿ ಸಮನ್ವಯ ಮತ್ತು ಮೇಲ್ವಿಚಾರಣೆ ಅತ್ಯಗತ್ಯವಾಗಿದೆ. ಮಾಹಿತಿ, ದತ್ತಾಂಶ ಸಂಗ್ರಹಣೆ ಮತ್ತು ಅವುಗಳನ್ನು ಅಧಿಕೃತಗೊಳಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಯೋಜನೆಯು ಸಂಪೂರ್ಣವಾಗಿ ಸಿದ್ಧಗೊಂಡ ನಂತರ, ಅದರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಸಾರ್ವಜನಿಕರೂ ಸಹ ವೀಕ್ಷಿಸುವಂತೆ ಅವಕಾಶ ಕಲ್ಪಿಸಲಾಗುವುದು. ಇದರಿಂದ ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ವಿಪತ್ತು ಸಂಭವಿಸಿದಾಗ ಲಭ್ಯವಿರುವ ಸುರಕ್ಷಾ ಉಪಕರಣಗಳು, ತುರ್ತು ಸಂದರ್ಭದಲ್ಲಿ ತೆರಳಬೇಕಾದ ಸಮೀಪದ ಸುರಕ್ಷಿತ ಸ್ಥಳಗಳು, ಅಲ್ಲಿಗೆ ತಲುಪಬೇಕಾದ ರಸ್ತೆ ಮಾರ್ಗ, ತಮ್ಮನ್ನು ಹುಡುಕಲು ಮತ್ತು ರಕ್ಷಿಸಲು ಸಂಪರ್ಕಿಸಬಹುದಾದ ಸಿಬಂದಿಗಳ ಮಾಹಿತಿ ಪಡೆಯಲು ಸಾಧ್ಯವಿದೆ ಎಂಬ ಮಾಹಿತಿ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಎಲ್ಲ ಅತ್ಯಾವಶ್ಯಕ ಸೌಲಭ್ಯಗಳ ವಿವರ ಒಂದೇ ಕಡೆ ದೊರೆಯುವಂತೆ ಮಾಹಿತಿಗಳು ಕ್ರೋಡೀಕರಿಸುತ್ತಿದ್ದೇವೆ. ವಿಪತ್ತಿನ ಸಂದರ್ಭದಲ್ಲಿ ವಿಳಂಬವಿಲ್ಲದೇ ಶೀಘ್ರ ರಕ್ಷಣಾ ಕಾರ್ಯಚರಣೆಗೆ ಅನುಕೂಲವಾಗಲಿದೆ. ಇದಕ್ಕೆ ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ನೆರವು ನೀಡಲಿದೆ.
-ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ ಉಡುಪಿ