Advertisement

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

12:46 AM Jun 29, 2024 | Team Udayavani |

ಉಡುಪಿ: ಸುಮಾರು 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮೂಲಕ ಸುಮಾರು 8 ಕೆಜಿ ದುಮಾಂಸವನ್ನು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ.

Advertisement

ಕಾರ್ಕಳದ ನಿವಾಸಿ ಪುಷ್ಪಾ (71) ಅವರ ಭುಜದ ಭಾಗದಲ್ಲಿ ಈ ಗಡ್ಡೆ ಇತ್ತು. ಅವರನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.26ರಂದು ಶಸ್ತ್ರಚಿಕಿತ್ಸ ತಜ್ಞ ಡಾ| ಸುಜಿತ್‌ ಅವರು ತಮ್ಮ ತಂಡದೊಂದಿಗೆ ಸುಮಾರು 3 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಈ ಗಡ್ಡೆಯನ್ನು ಹೊರತೆಗೆದಿದ್ದಾರೆ.

ಆಸ್ಪತ್ರೆಯ ಜನರಲ್‌ ಸರ್ಜನ್‌ ಆಗಿರುವ ಡಾ| ಸುಜಿತ್‌ ಅವರ ನೇತೃತ್ವದಲ್ಲಿ ಅರವಳಿಕೆ ತಜ್ಞರಾದ ಡಾ| ಉಮೇಶ್‌ ಉಪಾಧ್ಯಾಯ ಹಾಗೂ ಡಾ| ವಿಶ್ವನಾಥ್‌ ಶೆಟ್ಟಿ ಹಾಗೂ ನುರಿತ ಶುಶ್ರೂಷಕ ಅಧಿಕಾರಿಗಳ ಸಹಯೋಗದೊಂದಿಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಪ್ರಸ್ತುತ ರೋಗಿಯು ಚೇತರಿಕೆ ಕಾಣುತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next