ಉಡುಪಿ: ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್ ಹಾಗೂ ಚರಾಸ್ ಸಾಗಾಟ ಮಾಡತ್ತಿದ್ದ ಆರೋಪಿಯನ್ನು ಬಂಧಿಸಿ, ಸೊತ್ತುಗಳ ವಶಪಡಿಸಿಕೊಂಡ ಘಟನೆ ಜ.4ರ ಶನಿವಾರ ನಡೆದಿದೆ.
ಬ್ರಹ್ಮಾವರದ ಉಪ್ಪೂರು ನಿವಾಸಿ, ನಾಗರಾಜ್ (25) ಬಂಧಿತ ಆರೋಪಿ.
ಆರೋಪಿ ನಾಗರಾಜ್ ನಿಂದ 3.25 ಲಕ್ಷ ರೂ. ಮೊತ್ತದ ಎಂ.ಡಿ.ಎಂ.ಎ , ಚರಾಸ್ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈತ ತಾಲೂಕಿನ ಶಿವಳ್ಳಿ ಗ್ರಾಮದ ಬೀಡನಗುಡ್ಡೆಯ ಮಹಾತ್ಮಾ ಗಾಂಧಿ ಬಯಲು ರಂಗಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೋಟಾರು ಬೈಕ್‌ನಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಪೌಡರ್ ಹಾಗೂ ಚರಾಸ್ ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎಂದು ತಿಳಿದು ಬಂದಿದೆ.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭುಡಿ.ಟಿ ಹಾಗೂ ಉಡುಪಿ ನಗರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್, ಸಿಬ್ಬಂದಿಯವರಾದ ಸುರೇಶ್, ಬಶೀರ್, ಹೇಮಂತ್, ರಾಜೇಶ್, ವಿನಯ್ , ಆನಂದ, ಶಿವ ಕುಮಾರ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ಧರು.