Advertisement

ಉಡುಪಿ: ದುರ್ಗಾದೌಡ್‌: ತಲವಾರು ಪ್ರದರ್ಶನ, ಪ್ರಚೋದನಕಾರಿ ಭಾಷಣ; 2 ಪ್ರತ್ಯೇಕ ಪ್ರಕರಣ ದಾಖಲು

09:58 PM Oct 13, 2022 | Team Udayavani |

ಉಡುಪಿ: ಉಡುಪಿಯಲ್ಲಿ ನಡೆದ ದುರ್ಗಾ ದೌಡ್‌ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಸಾರ್ವಜನಿಕ ಸಭೆಯಲ್ಲಿ ಮಾಡಿರುವ ಪ್ರಚೋದನಕಾರಿ ಭಾಷಣದ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿವೆ.

Advertisement

ಅ. 2ರಂದು ಅಪರಾಹ್ನ 3.30ಕ್ಕೆ ಕಡಿಯಾಳಿಯಿಂದ ಹೊರಟು ಉಡುಪಿ ನಗರದಲ್ಲಿ ಸಾಗಿದ ದುರ್ಗಾ ದೌಡ್‌ ಮೆರವಗೆಯಲ್ಲಿ ಸುಮಾರು 10-15 ಮಂದಿಯ ಗುಂಪು ಅಕ್ರಮವಾಗಿ ಮಾರಕಾಸ್ತ್ರವಾದ ತಲವಾರು ಪ್ರದರ್ಶಿಸಿದ್ದು, ತ್ರಿವೇಣಿ ಸರ್ಕಲ್‌ ಬಳಿ ಆಗಮಿಸಿ ಮೆರವಣಿಗೆಯಲ್ಲಿ ತಲವಾರು ಹಿಡಿದು ತಾಲೀಮು ನಡೆಸಿ ಭಯ ಹುಟ್ಟಿಸುವ ದುಷ್ಕೃತ್ಯ ಎಸಗಿದ್ದಾರೆ ಎಂದು ಹುಸೈನ್‌ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅದೇ ದಿನ ಸಂಜೆ 6 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಸ್ಥಳದ ಎದುರು ಇರುವ ಖಾಸಗಿ ಸ್ಥಳದಲ್ಲಿ ನಡೆದ ದುರ್ಗಾ ದೌಡ್‌ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖಂಡ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಹಾಗೂ ಕಾಜಲ್‌ ಹಿಂದೂಸ್ಥಾನಿ ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ.

ಹಿಂದೂಗಳ ಮನೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟು ಪೂಜೆ ಮಾಡಿ ಅದನ್ನು ಬಳಸಬೇಕು ಹಾಗೂ ಸಣ್ಣ ಸಣ್ಣ ಹೆಣ್ಣು ಮಕ್ಕಳನ್ನು ಮುಸ್ಲಿಂ ಸಮುದಾಯದವರು ಲವ್‌ ಜಿಹಾದ್‌ ನಡೆಸಿ ವಂಚಿಸುತ್ತಿದ್ದಾರೆ. ಈ ಲವ್‌ ಜಿಹಾದ್‌ ಪ್ರಚೋದನೆಯಾಗಿ ಬಾಲಿವುಡ್‌ ಕಾರ್ಯಾಚರಿಸುತ್ತಿದೆ ಎಂದು ಒಂದು ಸಮುದಾಯವನ್ನು ದೂಷಿಸಿ ಇನ್ನೊಂದು ಧರ್ಮದವರೊಂದಿಗೆ ದ್ವೇಷ ಭಾವನೆ ಹುಟ್ಟುವಂತೆ ಇವರು ಭಾಷಣದಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next