Advertisement

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

08:10 PM Dec 21, 2024 | Team Udayavani |

ಉಡುಪಿ: ಜಿಲ್ಲೆಯ ಪ್ರವಾಸಿ ತಾಣ ಕುದ್ರು ದ್ವೀಪದಲ್ಲಿರುವ ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಶನಿವಾರ ಹಗಲು ಹೊತ್ತಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

Advertisement

ಏರ್‌ ಕಂಡಿಶನರ್‌ನಲ್ಲಿ ಬೆಂಕಿ ಕಾಣಸಿಕೊಂಡ ಪರಿಣಾಮ ಘಟನೆ ಸಂಭವಿಸಿದೆ. ಬೆಂಕಿ ಬಿದಿರಿನಿಂದ ನಿರ್ಮಿಸಿದ ಮಹಡಿ, ಇತರ ಅಲಂಕಾರಿಕ ಭಾಗಗಳಿಗೆ ವ್ಯಾಪಿಸಿಕೊಂಡಿತ್ತು. ದಟ್ಟ ಹೊಗೆಯಿಂದ ಆತಂಕ ಸೃಷ್ಟಿಯಾಗಿತ್ತು.

ಘಟನೆ ನಡೆದ ತತ್‌ಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಘಟನೆ ವೇಳೆ ಹೆಚ್ಚು ಮಂದಿ ಪ್ರವಾಸಿಗರು ಇರಲಿಲ್ಲ. ಇದರಿಂದಾಗಿ ಯಾರಿಗೂ ಅಪಾಯವಾಗಿಲ್ಲ ಎಂದು ರೆಸಾರ್ಟ್‌ ಮಾಲಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next