Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಕೆ.ಪಿ.ಎಂ.ಇ. ಅಡಿಯಲ್ಲಿ ಅನುಮತಿ ಪಡೆದ ಕ್ಲಿನಿಕ್‌ಗಳು ಹಾಗೂ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ವೆಚ್ಚದ ದರಪಟ್ಟಿಯನ್ನು ಹಾಗೂ ವೈದ್ಯರ ಮೇಲಿನ ಹಲ್ಲೆ ಕುರಿತು ಜಾರಿಗೆ ತಂದಿರುವ ಕಾನೂನು ಬಗ್ಗೆ ಎದ್ದು ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು. ವೈದ್ಯಾಧಿಕಾರಿಗಳು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿ ಮಾಡಬೇಕು ಎಂದರು.
ಭ್ರೂಣ ಹತ್ಯೆ ಮತ್ತು ಲಿಂಗ ಪತ್ತೆಯಂತಹ ಚಟುವಟಿಕೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಸಮಿತಿ ಸದಸ್ಯರು ಅನಿರೀಕ್ಷಿತವಾಗಿ ನಿರಂತರ ಭೇಟಿ ನೀಡಿ ಪರಿಶೀಲನೆ ಮಾಡ ಬೇಕು. 5 ತಿಂಗಳಲ್ಲಿ ಲಿಂಗಾನುಪಾತ 1000 ಗಂಡು ಮಕ್ಕಳಿಗೆ 1015 ಹೆಣ್ಣು ಮಕ್ಕಳ ಜನನವಾಗಿದೆ ಎಂದರು.
ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಕಾರ್ಯಸನ್ನದ್ಧರಾಗಬೇಕು. ಬಿಸಿಜಿ ಲಸಿಕೆಗೆ ಜಿಲ್ಲೆಯಲ್ಲಿ 45,857 ನೋಂದಣಿ ಮಾಡಿಸಿದ್ದು, ಲಸಿಕೆ ಜಿಲ್ಲೆಗೆ ಸರಬರಾಜು ಆದ ತತ್‌ಕ್ಷಣ ನೀಡಲು ಕ್ರಮವಹಿಸಲಾಗುವುದು ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಐ.ಪಿ. ಗಡಾದ್, ಜಿಲ್ಲಾ ಸರ್ಜನ್ ಡಾ| ಅಶೋಕ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ| ಲತಾ ನಾಯಕ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಜೋತ್ಸಾ$° ಬಿ.ಕೆ., ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ| ನಾಗರತ್ನಾ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.