Advertisement
ಬಹ್ರೈನ್, ಆಸ್ಟ್ರೇಲಿಯಾದಿಂದ ತಲಾ ಒಬ್ಬರು, ಸೌದಿ ಅರೇಬಿಯಾದಿಂದ ಬಂದ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಇಬ್ಬರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಬ್ಬರು ಕುಂದಾಪುರ, ಮತ್ತೂಬ್ಬರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳ ಗಂಟಲಿನ ದ್ರವದ ಮಾದರಿಯನ್ನು ಹಾಸನಕ್ಕೆ ಕಳುಹಿಸಲಾಗಿದೆ. ಈ ಹಿಂದಿನ ಎಂಟು ಪ್ರಕರಣಗಳ ವರದಿ ಇನ್ನಷ್ಟೇ ಬರಬೇಕಿದೆ. ಜಿಲ್ಲೆಯಲ್ಲಿ ಪ್ರಸ್ತುತ ಉಡುಪಿ ಜಿಲ್ಲಾಸ್ಪತ್ರೆ, ಕುಂದಾಪುರ, ಕೆಎಂಸಿಯಲ್ಲಿ ಒಟ್ಟು 12 ಮಂದಿ ಶಂಕಿತರು ಕೊರೊನಾ ರೋಗಲಕ್ಷಣ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 158 ಗ್ರಾ.ಪಂ.ಗಳಲ್ಲಿ ಕೋವಿಡ್ 19 ನಿಯಂತ್ರಣ ಕ್ರಮಗಳ ಕುರಿತ ಕರಪತ್ರಗಳನ್ನು ಮನೆ ಮನೆಗೆ ತಲುಪುವಂತೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ರೆಡ್ ಕ್ರಾಸ್ ಸಂಸ್ಥೆಗೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಎಲ್ಲ ಆರೋಗ್ಯ ಕೇಂದ್ರಗಳಿಗೆ ವಿತರಿಸುವಂತೆ ನಿರ್ದೇಶನ ನೀಡಿದರು.