Advertisement

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

12:10 PM Nov 15, 2024 | Team Udayavani |

ಉಡುಪಿ: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯ ವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್‌ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು ಹಾಗೂ ಮೀನುಗಾರಿಕೆ ವಲಯಕ್ಕೆ ಸಂಬಂಧಿಸಿದ ಇತರ ಚಟುವಟಿಕೆಗಳಲ್ಲಿ ನಿರತರಾದ ಪ್ರತಿಯೋರ್ವರೂ ನ್ಯಾಶನಲ್‌ ಫಿಶರೀಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್ ಪೋರ್ಟಲ್‌ನಲ್ಲಿ ನೇರವಾಗಿ ಅಥವಾ ಮೀನುಗಾರಿಕೆ ಸಹಕಾರಿ ಸಂಘಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರದ ಮೂಲಕ ಶುಲ್ಕ ರಹಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Advertisement

ನ್ಯಾಶನಲ್‌ ಫಿಶರೀಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಹೆಚ್ಚುವರಿ ಶುಲ್ಕ ವಿಧಿಸುವ ಮೀನುಗಾರಿಕೆ ಸಹಕಾರಿ ಸಂಘಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೇಲೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕಾನೂನು ಕ್ರಮ ಜರಗಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next