Advertisement

Udupi ಗಾಂಜಾ ಮಾರಾಟ: ಆರೋಪಿಗೆ ಶಿಕ್ಷೆ

11:06 PM Oct 25, 2023 | Team Udayavani |

ಉಡುಪಿ: ಗಾಂಜಾ ಸ್ವಾಧೀನ ಹೊಂದಿ ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

Advertisement

2020ರಲ್ಲಿ ಮಣಿಪಾಲದ ಶೀಂಬ್ರಾದಲ್ಲಿ ನಡೆದ ಘಟನೆಯಲ್ಲಿ ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಕಾರಿನಲ್ಲಿದ್ದ ಧಾರವಾಡ ಮೂಲಕ ಆರೋಪಿಗಳಾದ ಫಾರೂಕ್‌ ಶೇಖ್‌ ಹಾಗೂ ಅಬ್ದುಲ್‌ ರಜಾಕ್‌ ಅವರ ಕೈಯಲ್ಲಿದ್ದ ಪ್ಯಾಕೇಟ್‌ ಪರಿಶೀಲಿಸಿದಾಗ ಅದರಲ್ಲಿ 2 ಕೆಜಿ 7 ಗ್ರಾಂ ತೂಕದ ಗಾಂಜಾ ಇರುವುದು ಪತ್ತೆಯಾಗಿತ್ತು. ಗಾಂಜಾ, ಕಾರು ಹಾಗೂ ಆರೋಪಿಗಳನ್ನು ವಶಪಡಿಸಿಕೊಂಡು ಅವರ ಮೇಲೆ ಎನ್‌ಡಿಪಿಎಸ್‌ ಕಾಯ್ದೆಯಡಿ ಮಣಿಪಾಲ ಠಾಣೆಯ ವೃತ್ತ ನಿರೀಕ್ಷಕ ಮಂಜುನಾಥ ಅವರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಅವರು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಮಾನಿಸಿ ಆರೋಪಿಗಳಿಗೆ ತಲಾ 1 ವರ್ಷ ಕಠಿನ ಸಜೆ ಹಾಗೂ ತಲಾ 20,000 ರೂ. ದಂಡ ವಿಧಿಸಿ ಅ.25ರಂದು ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next