ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಗೀತಾ ಜಯಂತಿ ಪ್ರಯುಕ್ತ ಬೃಹತ್ ಗೀತೋತ್ಸವ, ಸಹಸ್ರಕಂಠ ಗೀತಾ ಪಾರಾಯಣವು ಡಿ. 11ರ ಬೆಳಗ್ಗೆ 9.30ರಿಂದ ರಾಜಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡುವರು. ಕಿರಿಯ ಪಟ್ಟದ ಶಿಷ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿರುವರು. ದಿಲ್ಲಿಯ ಬಿಎಪಿಎಸ್ ಸ್ವಾಮಿನಾರಾಯಣ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶ ದಾಸ್ ಉದ್ಘಾಟಿಸಲಿದ್ದಾರೆ ಈ ಪ್ರಯುಕ್ತ ಮಂಗಳವಾರ ಉಡುಪಿಯ ಕೃಷ್ಣಮಠಕ್ಕೆ ಆಗಮಿಸಿದರು.
ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು. ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕನಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಮಾಡಿಸಿ, ಶ್ರೀಕೃಷ್ಣ ಪ್ರಸಾದ ನೀಡಿದರು. ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಇದ್ದರು.
ಬಳಿಕ ಸಾಧು ಭದ್ರೇಶ ದಾಸ್ ಅವರು ರಥೋತ್ಸವದಲ್ಲಿ ಭಾಗವಹಿಸಿದರು. ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರು.
ನಾಳೆ ಬೆಳಿಗ್ಗೆ 9.30ಕ್ಕೆ ಗೀತಾ ಜಯಂತಿ ಮಹೋತ್ಸವದ ಉದ್ಘಾಟನೆ ನಡೆಯಲಿದೆ.