Advertisement

Udupi: ಜನ್ಮಾಷ್ಟಮಿಗೆ ಶ್ರೀಕೃಷ್ಣ ಮಠದಲ್ಲಿ ಸಿದ್ಧವಾಗುತ್ತಿದೆ ಉಂಡೆ, ಚಕ್ಕುಲಿ…

11:37 PM Aug 24, 2024 | Team Udayavani |

ಉಡುಪಿ: ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Advertisement

ಕೃಷ್ಣಾಷ್ಟಮಿ ಆಚರಣೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಸಕಲ ಸಿದ್ಧತಾ ಕಾರ್ಯ ವಿಜೃಂಭಣೆಯಿಂದ ನಡೆಯುತ್ತಿದೆ. ಆ.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ ನೆರವೇರಲಿದೆ. ರಥಬೀದಿಯಲ್ಲಿ ಆ. 27ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದೆ.

ಕೃಷ್ಣ ಪ್ರಸಾದಕ್ಕೆ ಅಗತ್ಯ ಇರುವ ಉಂಡೆ, ಚಕ್ಕುಲಿ ತಯಾರಿಸಲಾಗುತ್ತಿದೆ. ನಗರದಾದ್ಯಂತ ಹುಲಿವೇಷ, ವಿವಿಧ ವೇಷಗಳ ರಂಗು ಕಣ್ತುಂಬಿ ಕೊಳ್ಳಬಹುದು. ಈ ನಡುವೆ ಮಹಿಳಾ ಹುಲಿವೇಷಧಾರಿಗಳ ತಂಡವು ವಿಶೇಷವಾಗಿ ಗಮನ ಸೆಳೆಯುತ್ತಿದೆ.
ಅಷ್ಟಮಿಗೂ ಹುಲಿವೇಷಕ್ಕೂ ಬಿಡಿಸಲಾರದ ನಂಟು. ಉಡುಪಿಯ ಅಷ್ಟಮಿ ಸಂಭ್ರಮ ಎಂದರೆ ಹುಲಿವೇಷ.

ಮಾರ್ಪಳ್ಳಿ, ಅಲೆವೂರು, ನಿಟ್ಟೂರು, ಕೊರಂಗ್ರಪಾಡಿ, ಕಡಿಯಾಳಿ, ಮಲ್ಪೆ ಸಹಿತ ಮೊದಲಾದ ಕಡೆಗಳಲ್ಲಿ ಪ್ರಸಿದ್ಧ ಹುಲಿವೇಷ ತಂಡಗಳು ಜನರನ್ನು ರಂಜಿಸಿ, ಸಾಮಾಜಿಕ ಸೇವೆ ಮಾಡುತ್ತಾರೆ. ಇತ್ತೀಚೆಗೆ ಮಹಿಳೆಯರು ಹುಲಿವೇಷ ಹಾಕುತ್ತಿರುವುದು ಕಂಡು ಬರುತ್ತಿದೆ. ದರ್ಪಣ ನೃತ್ಯ ಸಂಸ್ಥೆಯ ಬಾಲಕಿ, ಯುವತಿಯರು, ಮಹಿಳೆಯರು ಒಳಗೊಂಡ ತಂಡವು ಈ ಬಾರಿ ಹುಲಿವೇಷದಲ್ಲಿ ಮಿಂಚಲಿದ್ದಾರೆ.

Advertisement

ಜಿಲ್ಲೆ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಉಡುಪಿಗೆ ಆಗಮಿಸುತ್ತಿದ್ದಾರೆ. ರಾಜಾಂಗಣದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವೈಚಾರಿಕ ಭಾಷಣಗಳಿದ್ದು, ನೂರಾರು ಮಂದಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಸಂಜೀವಿನಿ ಒಕ್ಕೂಟದ ಕರಕುಶಲ ವಸ್ತುಗಳ ಮಾರಾಟ ಮಳಿಗೆಗಳು ಸಂಭ್ರಮದ ರಂಗು ಹೆಚ್ಚಿಸಿದೆ. ವ್ಯಾಪಾರ ವಹಿವಾಟೂ ಹೆಚ್ಚಿಗೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next