Advertisement
ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಯನ್ನು ಶನಿವಾರ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಮೀನುಗಾರರು ದೇಶದ ಬೆನ್ನೆಲುಬು. ಮೀನುಗಾರರ ಬದುಕು ಸುಧಾ ರಿಸಿ ದಂತೆ ಮೀನುಗಾರಿಕೆ ವಲಯದ ಜತೆಗೆ ಆರ್ಥಿಕತೆಯೂ ಸುಧಾರಣೆಯ ಹಾದಿ ಯಲ್ಲಿ ಸಾಗಲಿದೆ. ಹಾಗಾಗಿ ಸರಕಾರ ಗಳು ಕರಾವಳಿ ಭಾಗವನ್ನು ಆದ್ಯತಾ ವಲಯವಾಗಿ ಪರಿಗಣಿಸಬೇಕು. ಸ್ಥಳೀಯ ಸಂವೇದನೆಯ ಜತೆಜಾಗತಿಕ ಅಭಿವೃದ್ಧಿ ದೃಷ್ಟಿಕೋನ ಇರಬೇಕು ಎಂದರು.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್ ಅವರು ಮಾತನಾಡಿ, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಪ್ರಸ್ತುತ ಅತಿ ಆವಶ್ಯಕ. ಆಧುನಿಕತೆಗೆ ತಕ್ಕಂತೆ ಸೌಲಭ್ಯವೂ ಉನ್ನತೀಕರಿಸಬೇಕು. ಈ ನಿಟ್ಟಿನಲ್ಲಿ ಮಹಾಲಕ್ಷ್ಮೀ ಕೋ-ಆಪ್ ಬ್ಯಾಂಕ್ ಗ್ರಾಹಕರಿಗೆ ಇನ್ನಷ್ಟು ಉತ್ಕೃಷ್ಟ ಸೇವೆ ನೀಡಲಿ ಎಂದು ಶುಭ ಹಾರೈಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭ ಹಾರೈಸಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಂಗಳೂರಿನ ರೋಹನ್ ಕಾರ್ಪೊರೇಶನ್ ಮುಖ್ಯಸ್ಥ ರೋಹನ್ ಮೊಂತೇರೊ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಉದ್ಯಮಿಗಳಾದ ಆನಂದ ಪಿ. ಸುವರ್ಣ, ಮೋಹನ್ ಬೇಂಗ್ರೆ, ಉಜ್ವಲ್ ಡೆವಲಪರ್ನ ಎಂಡಿ ಪುರು ಷೋತ್ತಮ ಶೆಟ್ಟಿ, ಬ್ಯಾಂಕಿನ ಉಪಾಧ್ಯಕ್ಷ ವಾಸುದೇವ ಪಿ. ಸಾಲ್ಯಾನ್, ಸುರೇಶ್ ಪ್ರಭು ಅವರ ಪತ್ನಿ ಉಮಾ ಸುರೇಶ್ ಪ್ರಭು ಉಪಸ್ಥಿತರಿದ್ದರು.
ಇದೇ ವೇಳೆ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯ ವಿತರಣೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ವೀಡಿಯೋ ಅನಾವರಣ ನಡೆಯಿತು. ಬ್ಯಾಂಕ್‌ನ ಅಧ್ಯಕ್ಷ, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿ ಸ್ವಾಗತಿಸಿ ಪ್ರಸ್ತಾವಿಸಿದರು. ಎಂಡಿ ಶರತ್ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ಸತೀಶ್ಚಂದ್ರಶೆಟ್ಟಿ ಹಾಗೂ ವಿಜೇತಾ ಶೆಟ್ಟಿ ನಿರೂಪಿಸಿ, ವಂದಿಸಿದರು.