Advertisement

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ

10:22 PM Oct 08, 2024 | Team Udayavani |

ಉಡುಪಿ: ರಾಜ್ಯದ ಸುಮಾರು 6,000 ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಮುಷ್ಕರದಿಂದಾಗಿ ಪಂಚಾಯತ್ ನ ಸಣ್ಣಪುಟ್ಟ ಕಾರ್ಯ, ಸಾಮಾನ್ಯ ಸಭೆಗಳಾಗದೇ ಸ್ಥಳೀಯಾಡಳಿತದಿಂದ ಸಿಗಬೇಕಾದ ಪರವಾನಗಿಗಳು, ನೀರು ಸರಬರಾಜು ಸ್ಥಗಿತದಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರೂ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ ತಕ್ಷಣವೇ ಮುಖ್ಯಮಂತ್ರಿಯವರು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

Advertisement

ಗ್ರಾ.ಪಂ.ಗಳ ಪಿಡಿಒ, ಕಾರ್ಯದರ್ಶಿ, ಎಸ್‌ಡಿಎ ಮತ್ತು ಪಂಚ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರವೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ವಾರಗಟ್ಟಲೇ ಪಂಚಾಯತ್ ರಾಜ್ ಆಡಳಿತ ಸ್ಥಗಿತವಾಗಿ ತೆರಿಗೆ ಸಂಗ್ರಹ ವ್ಯವಸ್ಥೆ ಕುಂಠಿತವಾಗಿದೆ. ಪಂಚಾಯತ್ ಸಿಬ್ಬಂದಿಗಳು ಸರಳ ಬೇಡಿಕೆ ಮುಂದಿಟ್ಟಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ- ದರ್ಜೆ ನೌಕರರಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದು, ಆರೇಳು ವರ್ಷಗಳ ಕಾಲ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಜಿಲ್ಲಾಮಟ್ಟದಲ್ಲಿ ಕೌನ್ಸಿಲ್ ಮೂಲಕ ವರ್ಗಾಯಿಸಬೇಕೆಂಬ ಅವರ ಬೇಡಿಕೆ ಅರ್ಥಪೂರ್ಣವಾದ್ದು ಎಂದು ಹೇಳಿದರು.

ಉದ್ಯೋಗ ಖಾತ್ರಿ ಯೋಜನೆ ಮತ್ತು ವೃಂದ ನೇಮಕಾತಿ ನಿಯಮಗಳ ರಚಿಸಲು ಸರ್ಕಾರಕ್ಕೆ ಸಾಧ್ಯವಾಗಲಿದೆ. ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್ ಗಳು, ನೀರುಗಂಟಿ ಜವಾನ ಮತ್ತು ಸ್ವಚ್ಛತೆಗಾರರ ವೇತನ ಪರಿಷ್ಕರಣೆಯ ಸರ್ಕಾರ ಮಾನವೀಯ ನೆಲೆಯಲ್ಲಿ ಮಾಡಬಹುದು. ಈ ಸರಳವಾದ ಬೇಡಿಕೆ ಆದ್ಯತೆಯ ಮೇಲೆ ಕೈಗೆತ್ತಿಕೊಂಡರೆ ಪಂಚಾಯತ್ ನೌಕರರ ಮುಷ್ಕರ ಕೊನೆಗೊಳ್ಳುವ ಸಾಧ್ಯತೆ ಇದೆ ಎಂದರು.

ಪ್ರತಿಭಟನಾ ಸ್ಥಳದಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ನಗರಸಭೆ ಅಧ್ಯಕ್ಷ ಪ್ರಭಾಕರ್‌ ಪೂಜಾರಿ ಆಗಮಿಸಿ ಮನವಿ ಸ್ವೀಕರಿಸಿದರು. ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಇಲಾಖೆ ಸಚಿವರಿಗೆ ಒಟ್ಟಾರೆ ಬೇಡಿಕೆಯ ಬಗ್ಗೆ ಗಮನಕ್ಕೆ ತರಲಾಗಿದ್ದು, ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮವಹಿಸಲಿದೆ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next