Advertisement
ಗುರುವಾರ ಉಡುಪಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರಕಾರಕ್ಕೆ ಹೇಳಿದ ಕೂಡಲೇ ನಿಲ್ಲಿಸಲು ಸಾಧ್ಯವಿಲ್ಲ. ಶಕ್ತಿ ಯೋಜನೆ ಜಾರಿಯಾದ ಅನಂತರ ಸಾರಿಗೆ ಸಂಸ್ಥೆಯ ನಿಗಮಗಳು ಹೆಸರು ಪಡೆದಿವೆ ಮತ್ತು ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು.
ರೈತರಿಗೆ ಅನ್ಯಾಯ ಆಗದು
ವಕ್ಫ್ ಆಸ್ತಿ ಬಗ್ಗೆ ಮಾತನಾಡಿದ ಸಚಿವೆ, ರೈತರ ಒಂದಿಂಚು ಜಾಗವನ್ನೂ ಯಾರಿಗೂ ಬಿಟ್ಟು ಕೊಡುವುದಿಲ್ಲ. ನಾವು ಪಕ್ಷಾತೀತ, ಜಾತ್ಯತೀತವಾಗಿ ಆಡಳಿತ ನಡೆಸುತ್ತೇವೆ. ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯುವುದಾಗಿ ಸಿಎಂ ಹೇಳಿದ್ದಾರೆ. ನಾನು ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಯಾವುದೇ ಸಂಘಟನೆ, ಜಾತಿಯನ್ನು ಓಲೈಸುವ ಕೆಲಸ ಆಗಬಾರದು ಎಂದು ಹೇಳಿದರು.