Advertisement

ಉಡುಪಿ ಹೆಲ್ಪ್ ಆ್ಯಪ್‌ ಬಿಡುಗಡೆ

10:33 PM Jun 12, 2019 | Team Udayavani |

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ಅವಘಡಗಳ ತುರ್ತು ಸ್ಪಂದನೆಗಾಗಿ ಸಿದ್ಧಪಡಿಸಲಾದ ಉಡುಪಿ ಹೆಲ್ಪ್ (Udupihelp) ಆ್ಯಪ್‌ ಅನ್ನು ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಡುಗಡೆ ಮಾಡಿದರು.

Advertisement

ಜನಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಲು ಜಿಲ್ಲಾಡಳಿತ ಉತ್ತಮ ಕಾರ್ಯ ಕೈಗೊಂಡಿದೆ. ಮಳೆಗಾಲದಲ್ಲಿ ಅವಘಡ ಸಂಭವಿಸಿದಾಗ ತುರ್ತು ಸ್ಪಂದನೆ ಅಗತ್ಯವಿದೆ. ಜನರು ಈ ಆ್ಯಪ್‌ ಮೂಲಕ ತಮ್ಮ ದೂರುಗಳನ್ನು ನೇರವಾಗಿ ಸ್ಥಳೀಯಾಡಳಿತಕ್ಕೆ ನೀಡಬಹುದಾಗಿದೆ ಎಂದು ಸಚಿವೆ ತಿಳಿಸಿದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಆ್ಯಪ್‌ನಲ್ಲಿ ದೂರು ದಾಖಲಾದ 6 ಗಂಟೆಯೊಳಗೆ ನಗರಸಭೆ ಅಧಿಕಾರಿಗಳು ಸ್ಪಂದಿಸಲಿದ್ದಾರೆ. ಆ್ಯಪ್‌ನಲ್ಲಿ ಘಟನೆಗೆ ಸಂಬಂಧಿಸಿದ ಫೋಟೋ ಮತ್ತು ವೀಡಿಯೋ ಅಪ್‌ಲೋಡ್‌ ಮಾಡಬಹುದು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷ್‌ ಕುಮಾರ್‌ ಉಪಸ್ಥಿತರಿದ್ದರು. ಸಾರ್ವಜನಿಕರು ಮೊಬೈಲ್‌ ಗೂಗಲ್‌ ಪ್ಲೇ ಸ್ಟೋರ್‌ನಿಂದ ಆ್ಯಪ್‌ ಡೌನ್‌ಲೋಡ್‌ ಮಾಡಬಹುದು.

Advertisement

Udayavani is now on Telegram. Click here to join our channel and stay updated with the latest news.

Next