Advertisement

ಹಿಜಾಬ್‌ ವಿವಾದ: ಉನ್ನತ ಮಟ್ಟದ ಸಮಿತಿ ರಚನೆ ಯಥಾಸ್ಥಿತಿ ಕಾಯುವಂತೆ ನಿರ್ದೇಶನ

01:02 AM Jan 26, 2022 | Team Udayavani |

ಉಡುಪಿ: ಸರಕಾರಿ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ ಎದ್ದಿರುವ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿ
ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಮತ್ತು ಯಥಾಸ್ಥಿತಿ ಕಾಯ್ದುಕೊಂಡು ಬರುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

Advertisement

ತಮ್ಮ ಆಯ್ಕೆ ವಸ್ತ್ರವನ್ನು ಧರಿಸಲು ಅನುಮತಿ ನೀಡುವಂತೆ ಆಗ್ರಹಿಸುತ್ತಿರುವ ಉಡುಪಿ ಬಾಲಕಿಯರ ಸರಕಾರಿ
ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶ ಪಡೆಯುವ ವೇಳೆ ಕಾಲೇಜು ನಿಗದಿ ಮಾಡಿದ್ದ ಸಮವಸ್ತ್ರ/ವಸ್ತ್ರ ಸಂಹಿತೆಯ ಕುರಿತು ಮಾಹಿತಿ ಇದ್ದು, ಅದನ್ನು ಒಪ್ಪಿ ಸ್ವ ಇಚ್ಛೆಯಿಂದ ಕಾಲೇಜಿಗೆ ದಾಖಲಾಗಿದ್ದಾರೆ. ಇಷ್ಟು ದಿನ ಇಲ್ಲದ ಗೊಂದಲವನ್ನು ಹೊಸದಾಗಿ ಸೃಷ್ಟಿಸುತ್ತಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳಿತಲ್ಲ.

ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಪದವಿಪೂರ್ವ ತರಗತಿಗಳ ವಿದ್ಯಾರ್ಥಿಗಳಿಗೆ ಜಾರಿಯಲ್ಲಿರುವ ಸಮವಸ್ತ್ರ ನೀತಿ ಸಂಹಿತೆಯನ್ನು ಪರಿಶೀಲಿಸಲು ಹಾಗೂ ಈ ಕುರಿತು ದೇಶದ ಸರ್ವೋಚ್ಚ ನ್ಯಾಯಾಲಯ, ರಾಜ್ಯಗಳ ಉಚ್ಚ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಅವಲೋಕಿಸಿಸುವುದು ಅಗತ್ಯವಾಗಿದೆ. ಸಮಿತಿಯ ಶಿಫಾರಸುಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯ ತನಕ ಯಥಾಸ್ಥಿತಿಯನ್ನು ಮುಂದುವರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next