Advertisement

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

01:37 AM Nov 24, 2024 | Team Udayavani |

ಉಡುಪಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದಿಲ್ಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ರಾಷ್ಟ್ರೀಯ ಭದ್ರತೆ, ದೇಶವಾಸಿಗಳ ಹಿತರಕ್ಷಣೆ ಸಹಿತ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ವಿಶೇಷವಾಗಿ ವಕ್ಫ್‌ ಬೋರ್ಡ್‌ ಅವಾಂತರದಿಂದ ರೈತಾಪಿ ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಸಂಕಟ, ಮುಜರಾಯಿ ಮುಕ್ತ ಹಿಂದೂ ದೇವಸ್ಥಾನದ ಆವಶ್ಯಕತೆ, ಬಾಂಗ್ಲಾದೇಶದಿಂದ ಭಾರತಕ್ಕೆ ಬರುತ್ತಿರುವ ನುಸುಳುಕೋರರು, ಮಣಿಪುರ, ಬಂಗಾಲ ಹಿಂಸಾಚಾರ ಸಹಿತ ಹಲವು ರಾಷ್ಟ್ರೀಯ ಹಿತಾಸಕ್ತಿಯ ವಿಚಾರಗಳನ್ನು ಕಾನೂನಿನ ನೆಲೆಯಲ್ಲಿ ಪರಿಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next