Advertisement

Udupi: ಹೊಟೇಲ್‌ ಕಾರ್ಮಿಕ ಕುಸಿದು ಸಾವು

12:13 AM Dec 07, 2024 | Team Udayavani |

ಉಡುಪಿ: ಕೆಲಸ ನಿರ್ವಹಿಸುತ್ತಿದ್ದ ವೇಳೆ ಕುಸಿದು ಬಿದ್ದು ಹೊಟೇಲ್‌ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ.

Advertisement

ಉಡುಪಿಯ ರೆಸ್ಟೋರೆಂಟ್‌ವೊಂದರಲ್ಲಿ ಕ್ಲೀನರ್‌ ಆಗಿದ್ದ ಲವ (60) ಮೃತರು. ಡಿ. 4ರಂದು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು.

ಕೂಡಲೇ ಅವರನ್ನು ಹೊಟೇಲ್‌ ಮಾಲಕ ಶೇಖರ್‌ ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರುಂಡ-ಮುಂಡ ಬೇರ್ಪಟ್ಟ ಶವ ಪತ್ತೆ
ಉಡುಪಿ: ಪರ್ಕಳ ಹೈಸ್ಕೂಲ್‌ನ ಹಿಂಭಾಗದ ಪಾಳುಬಿದ್ದ ಹಾಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿದೆ. ಮೇಲ್ನೋಟಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿದ್ದು, ಸುಮಾರು 10 ದಿನ ಕಳೆದಿರಬಹುದು ಎಂದು ತಿಳಿದುಬಂದಿದೆ.

ಕೆಟ್ಟ ವಾಸನೆ ಬರುತ್ತಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next