ಉಡುಪಿ: ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ನಿಟ್ಟೂರಿನ ಫಿಲಿಪ್ ಎಡ್ವರ್ಡ್ ಲೂವಿಸ್ (46) ಸಾವನ್ನಪ್ಪಿದ್ದಾರೆ.
Advertisement
ಅವಿವಾಹಿತರಾಗಿದ್ದ ಅವರು ಉಡುಪಿಯಲ್ಲಿ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ವಿಪರೀತ ಮದ್ಯಸೇವನೆ ಮಾಡುತ್ತಿದ್ದ ಅವರು ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.
ಮೇ 1ರಂದು ಅಂಬಲಪಾಡಿಯ ಬಳಿ ಅಸ್ವಸ್ಥರಾಗಿದ್ದ ಅವರನ್ನು ಸಮಾಜ ಸೇವಕ ವಿಶು ಶೆಟ್ಟಿಯವರು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದರು.
ಚಿಕಿತ್ಸೆಗೆ ಸ್ಪಂದಿಸದೆ ಮೇ 2ರಂದು ನಿಧನ ಹೊಂದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.