Advertisement

Udupi: ಹಾಸ್ಟೆಲ್‌ಗೆ ಅಕ್ರಮ ಪ್ರವೇಶಗೈದು ಕಿರುಕುಳ; ಪ್ರಕರಣ ದಾಖಲು

09:30 PM Sep 02, 2024 | Team Udayavani |

ಉಡುಪಿ: ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ.

Advertisement

ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು, ಕಿಟಕಿ ಬಳಿ ಮಲಗಿದ್ದ ವಿದ್ಯಾರ್ಥಿನಿಗೆ ಆತ ಕಿರುಕುಳ ನೀಡಿದ್ದಾನೆ. ಕೂಡಲೇ ವಿದ್ಯಾರ್ಥಿನಿ ಕಿರುಚಾಡಿದ್ದು, ಈ ವೇಳೆ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಓರ್ವ ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಹಾಸ್ಟೆಲ್‌ನಲ್ಲಿ 90ಕ್ಕೂ ಅಧಿಕ ಮಂದಿ ವಿದ್ಯಾರ್ಥಿನಿಯರಿದ್ದು, 3ರಿಂದ 4 ಮಂದಿ ಭದ್ರತ ಸಿಬಂದಿಗಳಿದ್ದಾರೆ. ಅವರ ಕಣ್ತಪ್ಪಿಸಿ ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next