Advertisement

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

11:36 PM Jan 03, 2025 | Team Udayavani |

ಉಡುಪಿ: ಮಕ್ಕಳ ರಕ್ಷಣೆಗೆಂದು ಜಾರಿಗೊಳಿಸಿದ ಕಾಯ್ದೆ, ಯೋಜನೆ, ನಿಯಮಾವಳಿಗಳು ಕೇವಲ ಸುತ್ತೋಲೆಗಷ್ಟೆ ಸೀಮಿತವಾಗಿರದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಜವಾಬ್ದಾರಿಯಿಂದ
ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯ ಡಾ| ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು

Advertisement

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ, ಜಿಲ್ಲಾಡಳಿತ, ಜಿ.ಪಂ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,
ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕದ ಸಹಯೋಗದಲ್ಲಿ ತಾ.ಪಂ. ಸಭಾಂಗಣದಲ್ಲಿ ಜರಗಿದ ಪೋಕೊÕà, ಬಾಲ್ಯವಿವಾಹ, ಆರ್‌ಟಿಇ, ಭ್ರೂಣಹತ್ಯೆ, ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆ ಕಾಯ್ದೆಗೆ ಪ್ರತಿವರ್ಷ ತಿದ್ದುಪಡಿ ಮಾಡಲಾಗುತ್ತದೆ. ಜಿಲ್ಲೆ, ತಾಲೂಕು ಮಟ್ಟದ ಸಹಭಾಗೀದಾರರು ಇದರ ಬಗ್ಗೆ ಅರಿವು ಹೊಂದಿರುವುದರ ಜತೆಗೆ ಇಲಾಖೆಗಳ ಜತೆ ಸಮನ್ವಯತೆ ಸಾಧಿಸಬೇಕು ಎಂದರು.

ಶಿಕ್ಷಣ ಸಂಸ್ಥೆ ರಕ್ಷಣ ಸಂಸ್ಥೆಯಾಗಬೇಕು
ಶಾಲೆಗಳು ಕೇವಲ ಶಿಕ್ಷಣ ಸಂಸ್ಥೆಗಳಲ್ಲದೆ, ಅವು ಮಕ್ಕಳಿಗೆ ರಕ್ಷಣೆಕೊಡುವ ಸಂಸ್ಥೆಗಳಾಗಿ ರೂಪುಗೊಳ್ಳಬೇಕು. ಮಕ್ಕಳ
ರಕ್ಷಣ ಅನುಷ್ಠಾನ ನೀತಿ,ಮಕ್ಕಳ ಸಹಾಯವಾಣಿ ತೆರೆಯಬೇಕು.ಏಕಪೋಷಕ, ಅನಾಥ ಮಕ್ಕಳು, ತಂದೆ-ತಾಯಿ ನಿರ್ಲಕ್ಷಿತ ಮಕ್ಕಳು, ಅಂಗವಿಕಲ ಮಕ್ಕಳು, ಆರ್ಥಿಕವಾಗಿ ಹಿಂದುಳಿದ ಮಕ್ಕಳೂ ಮತ್ತಿತರ ಸಂಕಷ್ಟಕ್ಕೊಳಗಾದ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್‌ ಪಿ.ಆರ್‌. ಮಾತನಾಡಿ ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ. ಅಧ್ಯಕ್ಷತೆ ವಹಿಸಿದ್ದರು.

Advertisement

ಸಂಪನ್ಮೂಲ ವ್ಯಕ್ತಿ ಯುನಿಸೆಫ್ನ ಸಿಸ್ಟರ್‌ ದುಲ್ಸಿನಾ ಕ್ರಾಸ್ತಾ ಮಕ್ಕಳ ರಕ್ಷಣೆಯ ಕುರಿತು ಮಾಹಿತಿ ನೀಡಿದರು. ಡಿವೈಎಸ್ಪಿ ಪ್ರಭು ಡಿ.ಟಿ., ತಾಲೂಕು ಪಂಚಾಯತ್‌ ಮ್ಯಾನೇಜರ್‌ ಫ‌ಝಾìನ್‌, ತಾ| ಮಟ್ಟದ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಸಿಬಂದಿ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನಾ ನಾಯಕ್‌ ಪ್ರಸ್ತಾವನೆಗೈದು ಸ್ವಾಗತಿಸಿದರು. ಜ್ಯೋತಿ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next