Advertisement

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

01:01 AM Sep 18, 2024 | Team Udayavani |

ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ 2023- 24ನೇ ಸಾಲಿನ ವಾರ್ಷಿಕ ಮಹಾ ಸಭೆ ಸೆ. 17ರಂದು ಮಂಗಳೂರಿನ ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಜರಗಿತು.

Advertisement

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ, ಕರಾವಳಿ ಜಿಲ್ಲೆಯ ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಹಲವು ದಶಕಗಳಿಂದ ಸ್ಪಂದಿಸಿ ಮೀನುಗಾರರ ಸಮಸ್ಯೆಗಳಿಗೆ ಧ್ವನಿಯಾಗಿ ಫೆಡರೇಶನ್‌ ಕಾರ್ಯನಿರ್ವ ಹಿಸುತ್ತಿದ್ದು, ಮೀನುಗಾರರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮತ್ಸ್ಯ ಸಂಪದ ಯೋಜನೆಯನ್ನು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಫೆಡರೇಶನ್‌ ನೇತೃತ್ವದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಲಾಗುವುದು ಎಂದರು.

ಶೀಘ್ರ ಮತ್ಸ್ಯಕ್ಯಾಂಟಿನ್‌
ಫೆಡರೇಶನ್‌ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ 25 ಲ.ರೂ. ಪ್ರತಿಭಾ ಪುರಸ್ಕಾರ, ಸಂಸ್ಥೆಯೊಂದಿಗೆ ವ್ಯವಹರಿಸುವ ಸದಸ್ಯ ಗ್ರಾಹಕರಿಗೆ 4 ಕೋ. ರೂ. ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸುಮಾರು 20 ಲ. ರೂ. ಆರೋಗ್ಯನಿಧಿ ನೀಡಲಾಗಿದೆ. ಸದಸ್ಯ ಸಂಘಗಳ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಾಗಾರ, ಸದಸ್ಯರಿಗೆ ಫೆಡರೇಶನಿನ ಕಾರ್ಯಕ್ಷೇತ್ರದ ವ್ಯಾಪ್ತಿ ಯಲ್ಲಿ ಆರೋಗ್ಯ ಶಿಬಿರ, ಆಯ್ದ ಕೇಂದ್ರಗಳಲ್ಲಿ ಮತ್ಸ್ಯ ಕ್ಯಾಂಟೀನ್‌ ಆರಂಭಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾರ್ಯೋನ್ಮುಖವಾಗಿದೆ ಎಂದು ಯಶ್‌ಪಾಲ್‌ ತಿಳಿಸಿದರು.

ತರಬೇತಿ ಕಾರ್ಯಗಾರ
ಫೆಡರೇಶನ್‌ ವತಿಯಿಂದ ಕೇಂದ್ರ ಸಮತ್ತು ರಾಜ್ಯ ಸರಕಾರದ ಸಹಕಾರ ದಿಂದ ಉರ್ವ ಸ್ಟೋರ್‌ನಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ಮತ್ಸ್ಯ ಸಂಪದ ನೂತನ ಪ್ರಧಾನ ಕಚೇರಿ ಕಟ್ಟಡ ಹಾಗೂ ಸಮುದಾಯ ಭವನದ ಕಾಮಗಾರಿ ಪ್ರಗತಿಯಲ್ಲಿದೆ. ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ, ಮಶ್ರಯ ವಸತಿ ಸಹಾಯಧನ ಏರಿಕೆ, ಅಂಬಿಗರ ಚೌಡಯ್ಯ ನಿಗಮದ ವಿದ್ಯಾರ್ಥಿ ವೇತನ, ಮೀನುಗಾರ ಮಹಿಳೆಯರ ಶೂನ್ಯ ಬಡ್ಡಿದರದಲ್ಲಿ ಸಾಲ ಮುಂತಾದ ಯೋಜನೆಗಳ ಅನುಷ್ಠಾನಕ್ಕೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಫೆಡರೇಶನ್‌ ಉಪಾಧ್ಯಕ್ಷ ದೇವಪ್ಪ ಕಾಂಚನ್‌, ಸಹಕಾರಿ ಸಂಘಗಳ ಉಪ ನಿಬಂಧಕ ಲಾವಣ್ಯ, ಮೀನು ಗಾರಿಕೆ ಉಪನಿರ್ದೇಶಕ ದಿಲೀಪ್‌, ವ್ಯವಸ್ಥಾಪಕ ನಿರ್ದೇಶಕಿ ದರ್ಶನ್‌ ಹಾಗೂ ಆಡಳಿತ ಮಂಡಳಿ ನಿರ್ದೇ ಶಕರು ಉಪಸ್ಥಿತರಿದ್ದರು.

Advertisement

ಸಮ್ಮಾನ
ರಾಷ್ಟ್ರಮಟ್ಟದ ಅತ್ಯುತ್ತಮ ಮೀನು ಗಾರಿಕೆ ಸಹಕಾರಿ ಸಂಘ ಪ್ರಶಸ್ತಿ ಪಡೆದ ಮಲ್ಪೆ ಯಾಂತ್ರಿಕ ಟ್ರಾಲ್‌ ದೋಣಿ ಮೀನುಗಾರರ ಪ್ರಾ. ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್‌, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಬಿ. ಮಂಜುನಾಥ ಕುಂದರ್‌ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ಯೋಗೀಶ್‌ ಕಾಂಚನ್‌ ಅವರನ್ನು ಸಮ್ಮಾನಿಸಲಾಯಿತು.

ಅರ್ಹ ಮೀನುಗಾರರಿಗೆ ಸರಕಾರಿ ಯೋಜನೆ
ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು ಸಹಕಾರಿ ಸಂಘಗಳನ್ನು ಬಲವರ್ಧನೆಗೊಳಿಸಲು ಯೋಜನೆ ಅನುಷ್ಠಾನ ಸಂಸ್ಥೆಯಾಗಿ ಫೆಡರೇಶನನ್ನು ಆಗಿ ಆಯ್ಕೆ ಮಾಡಿದ್ದು, ಸಂಸ್ಥೆಯ ಸದಸ್ಯ ಸಹಕಾರಿ ಸಂಘಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರದ ಮೀನುಗಾರಿಕೆ ಯೋಜನೆಯನ್ನು ಅರ್ಹ ಮೀನುಗಾರರಿಗೆ ತಲುಪಿಸಲು ಫೆಡರೇಶನ್‌ ಕಾರ್ಯೋನ್ಮುಖವಾಗಲಿದೆ.
-ಯಶ್‌ಪಾಲ್‌ ಸುವರ್ಣ, ಅಧ್ಯಕ್ಷರು, ಮೀನು ಮಾರಾಟ ಫೆಡರೇಶನ್‌

Advertisement

Udayavani is now on Telegram. Click here to join our channel and stay updated with the latest news.

Next