ಉಡುಪಿ: ಬಸ್ ಹಾಗೂ ಗೂಡ್ಸ್ ಟೆಂಪೋ ನಡುವೆ ಢಿಕ್ಕಿ ಹೊಡೆದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಗರದ ಶಿರಿಬಿಡು ಬಳಿ ಶುಕ್ರವಾರ ನಡೆದಿದೆ.
Advertisement
ಕರಾವಳಿ ಬ್ಯೆಪಾಸ್ ಬಳಿಯಿಂದ ಅತೀವೆಗದಿಂದ ಉಡುಪಿಯತ್ತ ಹೋಗುತ್ತಿದ್ದ ಬಸ್ ಶಿರಿಬಿಡು ಬಳಿ ಹಠತ್ತನೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಆಗಮಿಸುತ್ತಿದ್ದ ಗೂಡ್ಸ್ ಟೆಂಪೋ ಎದುರಿನಲ್ಲಿ ಬಸ್ಸಿಗೆ ಢಿಕ್ಕಿ ಹೊಡೆದಿದೆ.
ಡಿಕ್ಕಿಯಾದ ರಭಸಕ್ಕೆ ಟೆಂಪೋ ನಜ್ಜುಗುಜ್ಜಾಗಿದ್ದು, ಚಾಲಕ ಹಾಗೂ ಮತ್ತೊರ್ವ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.