Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರಗಿದ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಪತ್ರ ವ್ಯವಹಾರಗಳು ನಡೆದಿದ್ದವು. ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದಿರುವುದರಿಂದ ಆಗುತ್ತಿರುವ ತೊಂದರೆ ಬಗ್ಗೆ ಸಾರ್ವಜನಿಕರಿಂದ ಪ್ರತಿದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ. ವಾರಕ್ಕೊಮ್ಮೆ ಕಾಮಗಾರಿಯ ಮಾಹಿತಿ ನೀಡುವಂತೆ ಡಿಸಿ ಸೂಚಿಸಿದರು.
ಕಾಮಗಾರಿ ಕೈಗೊಳ್ಳಲು ರೈಲ್ವೇ ಇಲಾಖೆ ಅನುಮತಿ ನೀಡಿದ್ದು, ಸಿವಿಲ್ ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್ನ ಜೋಡಣೆ ಕಾಮಗಾರಿಗಳನ್ನು ಹಗಲು ಹಾಗೂ ರಾತ್ರಿ ಎರಡು ಪಾಳಿಯಲ್ಲಿ ಮಾಡಬೇಕು. ಜ.7ರ ಒಳಗೆ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಗಳನ್ನು ಮುಗಿಸಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ಕೊಂಕಣ ರೈಲ್ವೇಯ ಸೀನಿಯರ್ ಎಂಜಿನಿಯರ್ ಗೋಪಾಲಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾ.ಹೆ.ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಮತ್ತಿತರರು ಉಪಸ್ಥಿತರಿದ್ದರು.