Advertisement

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

05:58 PM Apr 18, 2024 | Team Udayavani |

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ಗುರುವಾರ (ಏ.18) ವಿವಿಧೆಡೆ ಭೇಟಿ ನೀಡಿ ಮತಯಾಚಿಸಿದರು.

Advertisement

ಅಲ್ಲದೇ ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯ, ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಾಲಯ, ಕಟಪಾಡಿಯ ಕೋಟೆ ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕಾಪು ಕ್ಷೇತ್ರದ ಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಕಾಪು ಕ್ಷೇತ್ರದ ಕುಕ್ಕೆಹಳ್ಳಿಯ ಓಜೋನ್ ಕ್ಯಾಷ್ಯು ಇಂಡಸ್ಟ್ರಿಯಲ್ಲಿ ಉಡುಪಿ  ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮತಯಾಚನೆ ಮಾಡಿದರು.

Advertisement

ಪೆರ್ಡೂರು ಸಮೀಪದ ಬುಕ್ಕೆ ಗುಡ್ಡೆಯಲ್ಲಿರುವ ಸಿಂಧೂ ಕ್ಯಾಷ್ಯೂ ಇಂಡಸ್ಟ್ರೀಸ್ ನಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಜರಿದ್ದರು.

ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಾಲಯದಲ್ಲಿ ಉಡುಪಿ  ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪೂಜೆ ಸಲ್ಲಿಸಿ ದೇವರ ದರರ್ಶನ ಪಡೆದರು.

ಉಡುಪಿ  ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಕಟಪಾಡಿಯ ಕೋಟೆ ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕಟಪಾಡಿಯ ಪೇಟೆಬೆಟ್ಟುವಿನಲ್ಲಿರು ಕೊರಗಜ್ಜ ಸನ್ನಿಧಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.

ಕಟಪಾಡಿಯ ಪೇಟೆಬೆಟ್ಟುವಿನಲ್ಲಿರು ಕೊರಗಜ್ಜ ಸನ್ನಿಧಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next