Advertisement

Udupi: ಶ್ರೀಕೃಷ್ಣ ಮಠದಲ್ಲಿ ಕದಿರುಹಬ್ಬ, ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆ

01:06 AM Oct 13, 2024 | Team Udayavani |

ಉಡುಪಿ: ವರ್ಷಂಪ್ರತಿಯಂತೆ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಹಬ್ಬ ಶನಿವಾರ ನೆರವೇರಿತು. ಮಠದ ಪುರೋಹಿತರು ಸಮೀಪದ ಗದ್ದೆಯ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ದಿವ್ಯ ಉಪಸ್ಥಿತಿಯಲ್ಲಿ ತರಲಾಯಿತು.

Advertisement

ತೆರೆದ ಮೂಡಣ ದ್ವಾರ
ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳ ತಂದು ಕೃಷ್ಣನ ಮುಂದಿಟ್ಟು ಶ್ರೀಪಾದರು ಮಂಗಳಾರತಿ ಬೆಳಗಿದರು. ವಿಶೇಷವೆಂದರೆ ಹೊಸ್ತಿಲು ಹುಣ್ಣಿಮೆಯ ದಿನ ಮತ್ತು ಕದಿರಾರೋಹಣದ ದಿನಗಳಂದು ಮಾತ್ರ ಗರ್ಭಗುಡಿಯ ಮೂಡಣ ದ್ವಾರ ತೆರೆಯಲಾಗುತ್ತದೆ.

ಅಲ್ಲಿಂದ ಕದಿರನ್ನು ಧಾನ್ಯ ಸಂಗ್ರಹಾಗಾರವಿರುವ ಬಡಗು ಮಾಳಿಗೆಗೆ ತಂದು ಆರತಿ ಬೆಳಗಲಾಯಿತು. ಉಡುಪಿಯ ಅಷ್ಟ ಮಠಗಳು, ಇತರ ಮಠಗಳು ಹಾಗೂ ಆಸುಪಾಸಿನ ಮನೆಯವರಿಗೆ ಭತ್ತದ ತೆನೆಗಳನ್ನು ಪ್ರಸಾದವಾಗಿ ವಿತರಿಸಲಾಯಿತು. ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನಾಚಾರ್ಯ, ವಿದ್ವಾಂಸರಾದ
ಮಧ್ವರಮ ಣಾಚಾರ್ಯ, ಗೋಪಾಲಾಚಾರ್ಯ, ವೇದವ್ಯಾಸ ಪುರಾಣಿಕ, ಪುರೋಹಿತರಾದ ರಾಘವೇಂದ್ರ ಕೊಡಂಚ , ಕೊಟ್ಟಾರಿ ರಾಮ ಕೊಡಂಚ, ನಾಗರಾಜತಂತ್ರಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next