Advertisement
ಕಿದಿಯೂರು ಹೊಟೇಲ್ಸ್‌ನ ಕಾರಣಿಕ ಶ್ರೀ ನಾಗ ಸಾನ್ನಿಧ್ಯದಲ್ಲಿ ಜ.31ರಂದು ನಡೆಯಲಿರುವ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ಸೋಮವಾರ ಶ್ರೀ ವಿಶ್ವೇಶತೀರ್ಥ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯನ್ನು ಪಂಚ ದೀವಟಿಗೆ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
Related Articles
Advertisement
ನಾಗಮಂಡಲೋತ್ಸವ ಆಯೋಜನ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕಿದಿಯೂರು ಹೊಟೇಲ್ಸ್‌ನ ಎಂಡಿ ಭುವನೇಂದ್ರ ಕಿದಿಯೂರು, ಆಯೋಜನ ಸಮಿತಿ ಪ್ರಧಾನ ಕಾರ್ಯದರ್ಶಿ ಯುವರಾಜ್ ಸಾಲ್ಯಾನ್ ಮಸ್ಕತ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ನಾಗರಾಜ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯ ಡಾ| ರವಿರಾಜ ಆಚಾರ್ಯ, ಕೊಡವೂರು ಶ್ರೀ ಸಾಯಿಬಾಬಾ ಮಂದಿರದ ಆಡಳಿತ ಟ್ರಸ್ಟಿ ದಿವಾಕರ ಶೆಟ್ಟಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಕಾರ್ತಿಕ್ ಗ್ರೂಪ್‌ನ ಆಡಳಿತ ನಿರ್ದೇಶಕ ಹರಿಯಪ್ಪ ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ದಿನೇಶ್ ಪುತ್ರನ್, ಉಚ್ಚಿಲ ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.
ನಾಗಮಂಡಲೋತ್ಸವ ಸಮಿತಿ ಉಪಾಧ್ಯಕ್ಷ ಗಣೇಶ್ ರಾವ್ ಸ್ವಾಗತಿಸಿ, ಸತೀಶ್ ಕೊಡವೂರು ವಂದಿಸಿ, ಸತೀಶ್‌ಚಂದ್ರ ನಿರೂಪಿಸಿದರು.
ಸಾಧಕರಿಗೆ ಸಮ್ಮಾನಬಾಲ ಪ್ರತಿಭೆ ಸಮೃದ್ಧಿ ಕುಂದಾಪುರ, ಉರಗ ತಜ್ಞ ಗುರುರಾಜ ಸನಿಲ್, ಸಮಾಜ ಸೇವಕರಾದ ವಿಶುಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹೇಶ್‌ಚಂದ್ರ, ಪ್ರಮುಖರಾದ ಮೀನಾ ಲಕ್ಷಣಿ ಅಡ್ಯಂತಾಯ ಅವರನ್ನು ಸಮ್ಮಾನಿಸಲಾಯಿತು. ಗಮನ ಸೆಳೆದ ಗಂಗಾರತಿ
ಕಿದಿಯೂರು ಹೊಟೇಲ್ ಎದುರುಗಡೆ ವಿಶೇಷವಾಗಿ ರಚಿಸಲಾದ ವೇದಿಕೆಗಳಲ್ಲಿ ವಾರಾಣಸಿಯ ಪರಿಣತ ಅರ್ಚಕರಿಂದ ಕಾಶೀ ವಿಶ್ವನಾಥನಿಗೆ ಗಂಗಾ ನದಿ ತಟದಲ್ಲಿ ಆರತಿ ಬೆಳಗುವ ಮಾದರಿಯಲ್ಲೇ ವೈಶಿಷ್ಟ್ಯ ಪೂರ್ಣ ಸಾಮೂಹಿಕ ಗಂಗಾರತಿ ಗಮನ ಸೆಳೆಯಿತು.