Advertisement

Udupi; ಇಂದು ಕೋಟ ಶ್ರೀನಿವಾಸ ಪೂಜಾರಿ, ಜಯಪ್ರಕಾಶ್‌ ಹೆಗ್ಡೆ ನಾಮಪತ್ರ ಸಲ್ಲಿಕೆ

12:41 AM Apr 03, 2024 | Team Udayavani |

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಎ. 3ರಂದು ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಗ್ಗೆ 10ಕ್ಕೆ ಬಿಜೆಪಿ ಜಿಲ್ಲಾ ಕಚೇರಿ ಬಳಿ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ನಡೆಯಲಿದೆ.

Advertisement

ಕೇಂದ್ರದ ಮಾಜಿ ಸಚಿವ, ಹಿಂದೂ ಫೈರ್‌ ಬ್ರ್ಯಾಂಡ್‌ ಬಸನಗೌಡ ಪಾಟೀಲ್‌ ಯತ್ನಾಳ್‌ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌, ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ್‌ ಗಂಟಿಹೊಳೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಮಾವೇಶದ ಅನಂತರ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯರು ನಾಯಕರೊಂದಿಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು.

ಉಡುಪಿ: ಇಂದು ಜಯಪ್ರಕಾಶ್‌ ಹೆಗ್ಡೆ ನಾಮಪತ್ರ ಸಲ್ಲಿಕೆ
ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಎ. 3ರ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಬ್ರಹ್ಮಗಿರಿ ಕಾಂಗ್ರೆಸ್‌ ಭವನದಲ್ಲಿ ಬೆಳಗ್ಗೆ 9ಕ್ಕೆ ಕಾರ್ಯಕರ್ತರೊಂದಿಗೆ ಸಭೆ ನಡೆಯಲಿದೆ. ಎಐಸಿಸಿ ಪ್ರ. ಕಾರ್ಯದರ್ಶಿ ರೋಝಿ ಜಾನ್‌, ಸಚಿವ ಕೆ.ಜೆ. ಜಾರ್ಜ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಮೊದಲಾದವರು ಭಾಗಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next