Advertisement

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

09:13 AM Aug 30, 2018 | |

ಉಡುಪಿ: ಶ್ರೀಕೃಷ್ಣ ಎಲ್ಲ ವರ್ಗದವರೊಂದಿಗೂ ಬೆರೆತು ಸಮಾನ ನ್ಯಾಯ ಒದಗಿಸಿದ ದೇವರು. ಹಾಗಾಗಿ ಎಲ್ಲ ವರ್ಗದವರು ಕೂಡ ಶ್ರೀಕೃಷ್ಣನನ್ನು ಆರಾಧಿಸುತ್ತಾರೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಹೇಳಿದರು.

Advertisement

ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಕೃಷ್ಣ ಲೀಲೋತ್ಸವದ ಪ್ರಯುಕ್ತ ನಡೆ ಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಪ್ತಾಹ ಕಾರ್ಯ ಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ಕಲೆ, ಸಂಸ್ಕೃತಿ ಉಳಿವಿನಲ್ಲಿ ಅಷ್ಟಮಿಯಂತಹ ಹಬ್ಬಗಳ ಪಾತ್ರ ಮಹತ್ವದ್ದು. ಎಲ್ಲ ಹಬ್ಬಗಳನ್ನು ಕೂಡ ಪರಿಸರ ಸ್ನೇಹಿಯಾಗಿ ಆಚರಿಸೋಣ ಎಂದು ಹೇಳಿದರು.

ಮಣಿಪಾಲ ಮಾಹೆ ವಿ. ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್ , ಬ್ರಹ್ಮಾವರ ವಿದ್ಯಾನಿಕೇತನ ಶಾಲೆಯ ನಿರ್ದೇಶಕ ಪ್ರಕಾಶ್ಚಂದ್ರ ಶೆಟ್ಟಿ, ಉದ್ಯಮಿ ರತ್ನಾಕರ ಶೆಟ್ಟಿ, ಮುಂಬೈ ಉದ್ಯಮಿ ಚಂದ್ರಕಾಂತ್‌ ಶೆಟ್ಟಿ, ಸಾಯಿಬಾಬಾ ಮಂದಿರದ ದಿವಾಕರ ಶೆಟ್ಟಿ, ಬಾಲಾಜಿ ರಾಘವೇಂದ್ರ ಆಚಾರ್ಯ ಶುಭಕೋರಿದರು. ಸೆ. 2ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆ. 3ರಂದು ವಿಟ್ಲಪಿಂಡಿ ಉತ್ಸವ ಜರುಗಲಿದ್ದು ಅಲ್ಲಿಯವರೆಗೆ ಪ್ರತಿನಿತ್ಯ ಸಂಜೆ ಹೆಸರಾಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 

Advertisement

Udayavani is now on Telegram. Click here to join our channel and stay updated with the latest news.

Next