ಉಡುಪಿ: ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು 14 ದಿನಗಳವರೆಗೂ ಸೀಲ್ ಡೌನ್ ಮಾಡಲಾಗುತ್ತದೆ.
ಇಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸೀಲ್ ಡೌನ್ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಕೋವಿಡ್ 19 ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸದ್ಯ ಉಡುಪಿ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ. ಬದಲಾಗಿ ನಾಳೆ ಸಂಜೆ 8 ಗಂಟೆ ಒಳಗೆ ಅಂತರ್ ಜಿಲ್ಲೆ ಪ್ರಯಾಣಿಸುವರಿಗೆ ಅವಕಾಶವಿದ್ದು. ನಾಳೆ ರಾತ್ರಿ 8 ಗಂಟೆ ನಂತರ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು 14 ದಿನಗಳು ಪೂರ್ತಿ ಸಿಲ್ ಡೌನ್ ಮಾಡಲಾಗುವುದು.
ಈ ಸಮಯದಲ್ಲಿ ಅಂತರ್ ಜಿಲ್ಲಾ ಪ್ರಯಾಣಿಕರಿಗೆ ಜಿಲ್ಲಾ ಪ್ರವೇಶವನ್ನು ಹಾಗೂ ಜಿಲ್ಲೆಯ ಜನತೆಗೆ ಹೊರ ಜಿಲ್ಲೆಗಳ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗೂ ಪ್ರತಿ ಆದಿತ್ಯವಾರದ ಸಂಪೂರ್ಣ ಲಾಕ್ ಡೌನ್ ಮುಂದುವರಿಸಲಾಗಿದೆ.
ಆದರೇ ಸೀಲ್ ಡೌನ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿಂದು 2496 ಕೋವಿಡ್ ಪ್ರಕರಣ: 1142 ಸೋಂಕಿತರು ಚೇತರಿಕೆ ; 87 ಸಾವು
ಸಭೆಯಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋಟ್, ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಹಾಯಕ ಕಮಿಷನರ್ ರಾಜು ಹಾಗೂ ಅರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು