Advertisement
ಕು.ಶಿ. ಹರಿದಾಸ ಭಟ್ಟರು ಕಾಲೇಜಿನಲ್ಲಿ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ, ಪ್ರಾಂಶುಪಾಲರಾಗಿ ಸುದೀರ್ಘ ಸೇವೆ ಸಲ್ಲಿಸಿ ಕಾಲೇಜನ್ನು ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿಸಿದವರು. ಶಿಕ್ಷಣದ ಜತೆಗೆ ಕಲೆ, ಸಾಹಿತ್ಯಕ್ಕೂ ವಿಶಿಷ್ಟ ಪ್ರೋತ್ಸಾಹ ನೀಡಿದ ವ್ಯಕ್ತಿತ್ವ ಅವರದು. ಕಲೆ, ಸಾಹಿತ್ಯ, ಜನಪದ ವಿಚಾರದಲ್ಲಿ ಉಡುಪಿ ಸಾಂಸ್ಕೃತಿಕ ನಗರಿ ಹೆಸರು ಪಡೆಯಲು ಕು.ಶಿ. ಅವರ ಶ್ರಮ ಅಪಾರ. ಈ ನಿಟ್ಟಿನಲ್ಲಿ ಅವರ ಜನ್ಮ ಶತಮಾನೋತ್ಸವ ಆಚರಣೆ ಯನ್ನು ಅರ್ಥ ಪೂರ್ಣ ವಾಗಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್ ನಾಯ್ಕ ಮಾತನಾಡಿ, ಬೆಳಗ್ಗೆ 9ಕ್ಕೆ ಅಡ್ಮಿನಿಸ್ಟ್ರೇಟಿವ್ ಬ್ಲಾಕ್‌ನಿಂದ ರವೀಂದ್ರ ಮಂಟಪದ ವರೆಗೆ ಹರಿದಾಸ ಭಟ್ಟರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಅನಂತರ ಉದ್ಘಾಟನೆ, 11.30ಕ್ಕೆ ಪಂ| ಟಿ. ರಂಗ ಪೈ ಅವರಿಂದ ಲಘು ಸಂಗೀತ, ನಿವೃತ್ತ ಪ್ರಾಚಾರ್ಯ ಪ್ರೊ| ಎಂ.ಎಲ್. ಸಾಮಗ ಅವರಿಗೆ ಗುರುವಂದನೆ, ಮಧ್ಯಾಹ್ನ 2ಕ್ಕೆ ಕಾಲೇಜು ವಿದ್ಯಾರ್ಥಿಗಳಿಂದ ಜಾನಪದ ನೃತ್ಯ, ಅಪರಾಹ್ನ 3ಕ್ಕೆ ಸಮಾರೋಪ, ಸಂಜೆ 4ಕ್ಕೆ “ವೀರ ಅಭಿಮನ್ಯು’ ಯಕ್ಷಗಾನ ಪ್ರದರ್ಶನ ಜರಗಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಮಾರೋಪ ಭಾಷಣ ಮಾಡಲಿದ್ದಾರೆ.
Related Articles
Advertisement
ಎಂಜಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಇಂದ್ರಾಳಿ ಯಕ್ಷಗಾನ ಸಲಹಾ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ, ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ, ಪ್ರ. ಕಾರ್ಯದರ್ಶಿ ಡಾ| ಎಂ. ವಿಶ್ವನಾಥ್ ಪೈ ಪತ್ರಿಕಾಗೋಷ್ಠಿಯಲ್ಲಿದ್ದರು.