Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಯದುವೀರ್ ಮಾತನಾಡಿ ನಾನೊಬ್ಬ ಜವಾಬ್ದಾರಿಯುತ ಜನಪ್ರತಿನಿಧಿ, ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ. ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಆಚರಣೆಗೆ ಸರ್ಕಾರದಿಂದ ಅನುಮತಿ ಪಡೆದು ಮಾಡಿಕೊಳ್ಳಬಹುದು. ನಿಯಮ ಅನುಸರಿಸಿ ಆಚರಣೆ ಮಾಡಿದರೆ ನಮಗೂ ಸಂತೋಷ ಎಂದರು.
ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರದಲ್ಲಿ ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದ್ದು, ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಈಗಾಗಲೇ ಎಫ್‍ಐಆರ್ ಕೂಡ ದಾಖಲಾಗಿರುವುದರಿಂದ ರಾಜೀನಾಮೆ ನೀಡುವುದು ಸೂಕ್ತ. ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತನಿಖೆಯಲ್ಲಿ ಏನು ವರದಿ ಬರುತ್ತದೆ ಎಂಬುದು ನೋಡಿ ಮತ್ತೆ ಸಿಎಂ ಸ್ಥಾನದಲ್ಲಿ ಮುಂದುವರಿಯಲಿ ಎಂದು ಸಂಸದ ಯದುವೀರ್ ಅಭಿಪ್ರಾಯಪಟ್ಟಿದ್ದಾರೆ.