Advertisement

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

07:55 PM Sep 29, 2024 | Team Udayavani |

ಉಡುಪಿ: ಮೈಸೂರು ಚಾಮುಂಡಿ ಬೆಟ್ಟ ಧಾರ್ಮಿಕ ಕ್ಷೇತ್ರ, ಅದು ಚಾಮುಂಡೇಶ್ವರಿ ತಾಯಿಯ ಆಸ್ತಿ. ನಾವು ಆ ತಾಯಿಯನ್ನು ಮಹಿಷಾಸುರಮರ್ದಿನಿ ಎಂದು ನಂಬುತ್ತೇವೆ. ಈ ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತೆ ಮಹಿಷ ದಸರಾ ಆಚರಿಸಬಹುದು. ಆದರೆ ಚಾಮುಂಡಿಬೆಟ್ಟದ ಮೇಲೆ ಮಹಿಷ ದಸರಾ (Mahisha Dasara) ಸರಿಯಲ್ಲ ಎಂದು ಸಂಸದ ಯದುವೀರ್ ಒಡೆಯರ್ (Yaduveer wadiyar) ಹೇಳಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಯದುವೀರ್‌ ಮಾತನಾಡಿ ನಾನೊಬ್ಬ ಜವಾಬ್ದಾರಿಯುತ ಜನಪ್ರತಿನಿಧಿ, ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ. ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಆಚರಣೆಗೆ ಸರ್ಕಾರದಿಂದ ಅನುಮತಿ ಪಡೆದು ಮಾಡಿಕೊಳ್ಳಬಹುದು. ನಿಯಮ ಅನುಸರಿಸಿ ಆಚರಣೆ ಮಾಡಿದರೆ ನಮಗೂ ಸಂತೋಷ ಎಂದರು.

ಈ ವೇಳೆ, ಮಹಿಷ ಮಂಡಲೋತ್ಸವ ಹಾಗೂ  ಚಾಮುಂಡಿ ಚಲೋ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ರವಿವಾರ ಚಾಮುಂಡಿ ತಾಯಿ ದರ್ಶನಕ್ಕೂ ಯಾರಿಗೂ ಅವಕಾಶ ಇಲ್ಲ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ: 
ರಾಜ್ಯದಲ್ಲಿರುವ ಕಾಂಗ್ರೆಸ್‌ ಸರಕಾರದಲ್ಲಿ ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದ್ದು, ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಈಗಾಗಲೇ ಎಫ್‍ಐಆರ್ ಕೂಡ ದಾಖಲಾಗಿರುವುದರಿಂದ ರಾಜೀನಾಮೆ ನೀಡುವುದು ಸೂಕ್ತ. ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತನಿಖೆಯಲ್ಲಿ ಏನು ವರದಿ ಬರುತ್ತದೆ ಎಂಬುದು ನೋಡಿ ಮತ್ತೆ ಸಿಎಂ ಸ್ಥಾನದಲ್ಲಿ ಮುಂದುವರಿಯಲಿ ಎಂದು ಸಂಸದ ಯದುವೀರ್ ಅಭಿಪ್ರಾಯಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next