ಉಡುಪಿ/ಮಂಗಳೂರು: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಜು. 24ರಿಂದ ಆರಂಭವಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.24ರಿಂದ ಜು.27ರ ವರೆಗೆ ಕೌನ್ಸಿಲಿಂಗ್ ಮಂಗಳೂರು ತಾಲೂಕು ಕಚೇರಿ ಆವರಣ
ದಲ್ಲಿರುವ ಸರಕಾರಿ ನೌಕರರ ಸಂಘದಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಿದ ಶಿಕ್ಷಕರು ನಿರ್ದಿಷ್ಟ ದಿನದಂದು ಮೂಲ ದಾಖಲೆ
ಗಳೊಂದಿಗೆ ಹಾಜರಾಗಬೇಕು ಎಂದು ದ.ಕ. ಡಿಡಿಪಿಐ ಪ್ರಕಟನೆ ತಿಳಿಸಿದೆ.
ಉಡುಪಿ ಜಿಲ್ಲೆಯೊಳಗೆ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರ ಕೌನ್ಸೆಲಿಂಗ್ ಜು. 24ರಂದು ಉಡುಪಿಯ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ನ ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 10.30ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ದಿನ 200 ಮಂದಿಗೆ ಅವಕಾಶ ಸಿಗಲಿದೆ.
ಜು.25ರಂದು ಪ್ರಾಥಮಿಕ ಶಾಲಾ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ. ಜು.26ರಂದು ಪ್ರೌಢಶಾಲೆಯ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ. ಜು. 29ರಂದು ಸರಕಾರಿ ಪ್ರೌಢಶಾಲಾ ಶಿಕ್ಷಕರ ಹಾಗೂ ಜು. 30ರಂದು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಡಿಡಿಪಿಐ ಕಚೇರಿಯಲ್ಲಿ ನಡೆಯಲಿದೆ.