Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಪ್ರಾಣಿಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಿದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಶ್ವಾನ ಕಡಿತ ಪ್ರಕರಣ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನಾಯಿ ಹಾಗೂ ಹಾವು ಕಚ್ಚಿದವರಿಗೆ ಚಿಕಿತ್ಸೆ ನೀಡಲು ಅಗತ್ಯ ಪ್ರಮಾಣ ದಲ್ಲಿ ಲಸಿಕೆಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿಎಚ್ಒ ಡಾ| ಐ.ಪಿ. ಗಡಾದ್, ಜಿಲ್ಲಾ ಸರ್ಜನ್ ಡಾ| ಎಚ್. ಅಶೋಕ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ನಾಗರತ್ನಾ, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ| ಪ್ರಶಾಂತ್ ಭಟ್ ಉಪಸ್ಥಿತರಿದ್ದರು.