Advertisement

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

01:27 AM Nov 24, 2024 | Team Udayavani |

ಮಣಿಪಾಲ: ಸಾಮಾನ್ಯವಾಗಿ ಉಷ್ಣಾಂಶ ಹೆಚ್ಚಿರುವ ನವೆಂಬರ್‌ನಿಂದ ಜೂನ್‌ ಅವಧಿಯಲ್ಲಿ ಮಂಗನ ಜ್ವರ ಕಾಯಿಲೆ (ಕೆಎಫ್ಡಿ) ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಪ್ರಾಣಿಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಿದ ಅಂತರ್‌ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಯಿ ಕಡಿತ: ಎಚ್ಚರಿಕೆ ಅಗತ್ಯ
ಜಿಲ್ಲೆಯಲ್ಲಿ ಶ್ವಾನ ಕಡಿತ ಪ್ರಕರಣ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನಾಯಿ ಹಾಗೂ ಹಾವು ಕಚ್ಚಿದವರಿಗೆ ಚಿಕಿತ್ಸೆ ನೀಡಲು ಅಗತ್ಯ ಪ್ರಮಾಣ ದಲ್ಲಿ ಲಸಿಕೆಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿಎಚ್‌ಒ ಡಾ| ಐ.ಪಿ. ಗಡಾದ್‌, ಜಿಲ್ಲಾ ಸರ್ಜನ್‌ ಡಾ| ಎಚ್‌. ಅಶೋಕ್‌, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ನಾಗರತ್ನಾ, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ| ಪ್ರಶಾಂತ್‌ ಭಟ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next