Advertisement

ಉಡುಪಿ: ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

12:46 AM May 22, 2022 | Team Udayavani |

ಉಡುಪಿ: ಹಣ್ಣುಗಳ ರಾಜನೆಂದೇ ಪ್ರಸಿದ್ಧಿ ಪಡೆದಿರುವ ಮಾವು ಮೇಳಕ್ಕೆ ಶನಿವಾರ ಉಡುಪಿ ದೊಡ್ಡಣಗುಡ್ಡೆ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಶಾಸಕ ಕೆ. ರಘುಪತಿ ಭಟ್‌ ಚಾಲನೆ ನೀಡಿದರು.

Advertisement

ಮೇ 23ರ ವರೆಗೆ ಮೇಳ ನಡೆಯಲಿದ್ದು, 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ.

ರಾಮನಗರ ಜಿಲ್ಲೆಯ ಬೆಳೆಗಾರರು ಬೆಳೆದ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ, ಬೈಗಂಪಲ್ಲಿ, ರತ್ನಗಿರಿ, ಸಹಿತ ವಿವಿಧ ತಳಿಯ 30 ಟನ್‌ ಮಾವು ಮೇಳದಲ್ಲಿ ಲಭ್ಯವಿದೆ.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಸಹಾ ಯಕ ಕಮಿಷನರ್‌ ರಾಜು ಕೆ., ತೋಟ ಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟ ಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ನಿಧೀಶ್‌ ಹೊಳ್ಳ ಉಪಸ್ಥಿತರಿದ್ದರು.

ಮಾರುಕಟ್ಟೆ ಅವಶ್ಯ
ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲು ಮಾವು ಮೇಳ ಉತ್ತಮ ಕಾರ್ಯಕ್ರಮವಾಗಿದೆ. ರೈತರು ಉತ್ಪನ್ನಗಳನ್ನು ದಲ್ಲಾಳಿ ಗಳ ಮೂಲಕ ಮಾರಾಟ ಮಾಡುವುದರಿಂದ ಅದರ ಸಂಪೂರ್ಣ ಲಾಭವನ್ನು ದಲ್ಲಾಳಿಗಳೇ ಪಡೆದುಕೊಳ್ಳುತ್ತಾರೆ. ರೈತರಿಗೆ ಸೂಕ್ತ ಬೆಲೆ ದೊರಕಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಾನೂನಿನ ಮೂಲಕ ರೈತರಿಗೆ ಆಗುವಂತಹ ನಷ್ಟವನ್ನು ತಪ್ಪಿಸಿ ಕ್ರಮ ತೆಗೆದುಕೊಂಡಿದೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ ಅವರು ಹೇಳಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next